ಕರ್ನಾಟಕದಲ್ಲಿ ಕೊವಿಡ್-19 ಸಂಖ್ಯೆಯಲ್ಲಿ ದಾಖಲೆಯ ಇಳಿಕೆ

ಬೆಂಗಳೂರು, ನವೆಂಬರ್.15: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಇಳಿಕೆಯಾಗಿದೆ. ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ನಿಯಂತ್ರಣಕ್ಕೆ ಬಂದಿರುವ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1565 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 822953ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣವು ಶೇ.1.57ರಷ್ಟಿದೆ ಎಂದು ತಿಳಿಸಿದ್ದಾರೆ.

ಈ ವಿಶೇಷ ಮಾಸ್ಕ್ ಧರಿಸಿದರೆ ಕೊರೊನಾವೈರಸ್ ಅಂಟುವುದಿಲ್ಲ!
ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 17075 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 82531 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ.

1565 New Coronavirus Cases Reported in Karnataka Today, State Tally Rise to 822953

ಒಂದೇ ದಿನ ಒಟ್ಟು 99606 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 94,92,080 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲೆವಾರು ಕೊರೊನಾವೈರಸ್ ಕೇಸ್?:
ರಾಜ್ಯದಲ್ಲಿ ಒಟ್ಟು 1656 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 08, ಬಳ್ಳಾರಿ 20, ಬೆಳಗಾವಿ 47, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು 840, ಬೀದರ್ 7, ಚಾಮರಾಜನಗರ 7, ಚಿಕ್ಕಬಳ್ಳಾಪುರ 32, ಚಿಕ್ಕಮಗಳೂರು 11, ಚಿತ್ರದುರ್ಗ 52, ದಕ್ಷಿಣ ಕನ್ನಡ 34, ದಾವಣಗೆರೆ 19, ಧಾರವಾಡ 16, ಗದಗ 5, ಹಾಸನ 26, ಹಾವೇರಿ 5, ಕಲಬುರಗಿ 31, ಕೊಡಗು 21, ಕೋಲಾರ 14, ಕೊಪ್ಪಳ 5, ಮಂಡ್ಯ 46, ಮೈಸೂರು 71, ರಾಯಚೂರು 27, ರಾಮನಗರ 17, ಶಿವಮೊಗ್ಗ 38, ತುಮಕೂರು 79, ಉಡುಪಿ 14, ಉತ್ತರ ಕನ್ನಡ 45, ವಿಜಯಪುರ 7, ಯಾದಗಿರಿ 7, ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      ಲಸಿಕೆಯಿಂದ ತೊಂದ್ರೆ ಆಗತ್ತಾ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+