ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಾವಿನ ಸಂಖ್ಯೆ ಇಳಿಮುಖ
ಬೆಂಗಳೂರು, ಆಗಸ್ಟ್ 8: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಳಿತ ಮುಂದುವರಿದಿದೆ. ರಾಜ್ಯದಲ್ಲಿ ಮಹಾಮಾರಿಯಿಂದ ಪ್ರಾಣ ಬಿಡುತ್ತಿರುವವರ ಸಂಖ್ಯೆಯಲ್ಲಿ ಕ್ರಮೇಣ ಇಳಿಕೆ ಕಂಡು ಬಂದಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.09ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.25ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1598 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1914 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 20 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36793 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2918525ಕ್ಕೆ ಏರಿಕೆಯಾಗಿದೆ. ಒಟ್ಟು 2857776 ಸೋಂಕಿತರು ಗುಣಮುಖರಾಗಿದ್ದು. 23930 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ 348 ಜನರಿಗೆ ಕೊವಿಡ್-19
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 348 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1230486ಕ್ಕೆ ಏರಿಕೆಯಾಗಿದೆ. 1 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15914ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8493 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 32,270 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,14,176 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,46,446 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 73,82,806 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,24,63,517 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,98,46,323 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?
ರಾಜ್ಯದಲ್ಲಿ ಒಟ್ಟು 1598 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 2, ಬಳ್ಳಾರಿ 10, ಬೆಳಗಾವಿ 37, ಬೆಂಗಳೂರು ಗ್ರಾಮಾಂತರ 25 ಬೆಂಗಳೂರು 348, ಬೀದರ್ 2, ಚಾಮರಾಜನಗರ 22, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 52, ಚಿತ್ರದುರ್ಗ 22, ದಕ್ಷಿಣ ಕನ್ನಡ 438, ದಾವಣಗೆರೆ 15, ಧಾರವಾಡ 7, ಗದಗ 1, ಹಾಸನ 80, ಹಾವೇರಿ 2, ಕಲಬುರಗಿ 5, ಕೊಡಗು 83, ಕೋಲಾರ 36, ಕೊಪ್ಪಳ 7, ಮಂಡ್ಯ 31, ಮೈಸೂರು 98, ರಾಯಚೂರು 4, ರಾಮನಗರ 0, ಶಿವಮೊಗ್ಗ 37, ತುಮಕೂರು 38 ಉಡುಪಿ 129, ಉತ್ತರ ಕನ್ನಡ 53, ವಿಜಯಪುರ 1, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Recommended Video

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
ರಾಜ್ಯದಲ್ಲಿ ಈವರೆಗೂ 7,61,525 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,54,490 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,31,372 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,76,548 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,24,19,290 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 55,81,445 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,55,71,602 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 73,30,212 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications