• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದಲ್ಲಿ 1,606 ಕೊರೊನಾ ಸೋಂಕಿತರು ಪತ್ತೆ, 31 ಮಂದಿ ಸಾವು

|
Google Oneindia Kannada News

ಬೆಂಗಳೂರು, ಜುಲೈ 26: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,606 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 31 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,96,163ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 467 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,25,227ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ. ಒಟ್ಟು 2896163 ಪ್ರಕರಣಗಳಿವೆ.

ಸಿಹಿಸುದ್ದಿ: ಕರ್ನಾಟಕದ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 1001ಕ್ಕೆ ಇಳಿಕೆಸಿಹಿಸುದ್ದಿ: ಕರ್ನಾಟಕದ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 1001ಕ್ಕೆ ಇಳಿಕೆ

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 31 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,405ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ರಾಜ್ಯದಲ್ಲಿ ಇಂದು 1,937 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,36,678ಕ್ಕೆ ಏರಿಕೆಯಾಗಿದೆ. ಇನ್ನು 23,057 ಸಕ್ರಿಯ ಪ್ರಕರಣಗಳಿವೆ.

ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 69, ಚಿಕ್ಕಮಗಳೂರು 38, ದಕ್ಷಿಣ ಕನ್ನಡ 357, ಹಾಸನ 57, ಮೈಸೂರು 162, ಶಿವಮೊಗ್ಗ 52, ತುಮಕೂರು 59, ಉಡುಪಿ 78 ಪ್ರಕರಣಗಳು ವರದಿಯಾಗಿದೆ.

ಇನ್ನು ರಾಜ್ಯದ ಬಾಗಲಕೋಟೆ, ಬಳ್ಳಾರಿ, ಬೀದರ್, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ರಾಜ್ಯಾದ್ಯಂತ ಇಂದು 1,14,072 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,606 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.40ಕ್ಕೆ ಇಳಿದಿದೆ.

   B S Yediyurappa ರಾಜೀನಾಮೆಗೆ ಕಾಯ್ತಿದ್ದವರಿಗೆ ಈಗ ಹಾಲು ಕುಡಿದಷ್ಟು ಸಂತೋಷ | Oneindia Kannada
   English summary
   1,606 New Coronavirus Cases Reported in Karnataka Today, State Tally Rise to 2896163.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X