ಕರ್ನಾಟಕದಲ್ಲಿ ಒಂದೇ ದಿನ 1632 ಮಂದಿಗೆ ಕೊರೊನಾವೈರಸ್!

ಬೆಂಗಳೂರು, ಆಗಸ್ಟ್ 14: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ನಿನ್ನೆಗಿಂತ ಇಂದು ಇಳಿಮುಖವಾಗಿದೆ. ಶುಕ್ರವಾರ 1669 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಶನಿವಾರ 1632 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.04ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.53ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1632 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1612 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 25 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36958 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2928033ಕ್ಕೆ ಏರಿಕೆಯಾಗಿದೆ. ಒಟ್ಟು 2868351 ಸೋಂಕಿತರು ಗುಣಮುಖರಾಗಿದ್ದು. 22698 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ರಾಜಧಾನಿಯಲ್ಲಿ 377 ಜನರಿಗೆ ಕೊವಿಡ್-19

ರಾಜ್ಯ ರಾಜಧಾನಿಯಲ್ಲಿ 377 ಜನರಿಗೆ ಕೊವಿಡ್-19

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 377 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1232597ಕ್ಕೆ ಏರಿಕೆಯಾಗಿದೆ. 1 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15934ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8200 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 30,994 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,24,995 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,59,989 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 75,69,392 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,31,89,356 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,07,58,748 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1632 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 2, ಬಳ್ಳಾರಿ 2, ಬೆಳಗಾವಿ 41, ಬೆಂಗಳೂರು ಗ್ರಾಮಾಂತರ 14 ಬೆಂಗಳೂರು 377, ಬೀದರ್ 0, ಚಾಮರಾಜನಗರ 17, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 53, ಚಿತ್ರದುರ್ಗ 22, ದಕ್ಷಿಣ ಕನ್ನಡ 411, ದಾವಣಗೆರೆ 5, ಧಾರವಾಡ 3, ಗದಗ 0, ಹಾಸನ 97, ಹಾವೇರಿ 1, ಕಲಬುರಗಿ 3, ಕೊಡಗು 77, ಕೋಲಾರ 18, ಕೊಪ್ಪಳ 3, ಮಂಡ್ಯ 39, ಮೈಸೂರು 112, ರಾಯಚೂರು 1, ರಾಮನಗರ 3, ಶಿವಮೊಗ್ಗ 60, ತುಮಕೂರು 43, ಉಡುಪಿ 169, ಉತ್ತರ ಕನ್ನಡ 49, ವಿಜಯಪುರ 2, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,62,278 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,61,741 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,34,052 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 4,02,287 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,26,60,381 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 58,40,957 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,65,87,616 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 78,18,197 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+