ಕರ್ನಾಟಕದಲ್ಲಿ ಒಂದೇ ದಿನ 1653 ಮಂದಿಗೆ ಕೊರೊನಾವೈರಸ್
ಬೆಂಗಳೂರು, ಜುಲೈ 22: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.17ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.87ರಷ್ಟಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36293 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 1653 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2572 ಸೋಂಕಿತರು ಗುಣಮುಖರಾಗಿದ್ದಾರೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,89,994ಕ್ಕೆ ಏರಿಕೆಯಾಗಿದೆ. ಈವರೆಗೂ 2828983 ಸೋಂಕಿತರು ಗುಣಮುಖರಾಗಿದ್ದು. 24695 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 23,755 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,16,588 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,40,343 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 68,88,602 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,05,37,592 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,74,26,194 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.
ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ
Recommended Video
ರಾಜ್ಯದಲ್ಲಿ ಒಟ್ಟು 1653 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 6, ಬೆಳಗಾವಿ 60, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು 418, ಬೀದರ್ 0, ಚಾಮರಾಜನಗರ 29, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 64, ಚಿತ್ರದುರ್ಗ 21, ದಕ್ಷಿಣ ಕನ್ನಡ 229, ದಾವಣಗೆರೆ 27, ಧಾರವಾಡ 14, ಗದಗ 3, ಹಾಸನ 97, ಹಾವೇರಿ 2, ಕಲಬುರಗಿ 3, ಕೊಡಗು 107, ಕೋಲಾರ 21, ಕೊಪ್ಪಳ 2, ಮಂಡ್ಯ 36, ಮೈಸೂರು 134, ರಾಯಚೂರು 2, ರಾಮನಗರ 3, ಶಿವಮೊಗ್ಗ 87, ತುಮಕೂರು 104, ಉಡುಪಿ 82, ಉತ್ತರ ಕನ್ನಡ 34, ವಿಜಯಪುರ 9, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.