ಕೊರೊನಾವೈರಸ್ ಕಥೆ: ಕರ್ನಾಟಕದ 1669 ಮಂದಿಗೆ ಅಂಟಿದ ಮಹಾಮಾರಿ!

ಬೆಂಗಳೂರು, ಆಗಸ್ಟ್ 13: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ನಿನ್ನೆಗಿಂತ ಇಂದು ಇಳಿಮುಖವಾಗಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.98ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.31ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1669 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1672 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 22 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36933 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2926401ಕ್ಕೆ ಏರಿಕೆಯಾಗಿದೆ. ಒಟ್ಟು 2866739 ಸೋಂಕಿತರು ಗುಣಮುಖರಾಗಿದ್ದು. 22703 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ರಾಜಧಾನಿಯಲ್ಲಿ 425 ಜನರಿಗೆ ಕೊವಿಡ್-19

ರಾಜ್ಯ ರಾಜಧಾನಿಯಲ್ಲಿ 425 ಜನರಿಗೆ ಕೊವಿಡ್-19

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 425 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1232220ಕ್ಕೆ ಏರಿಕೆಯಾಗಿದೆ. 5 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15933ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8189 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 33,528 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,35,804 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,69,332 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 75,38,398 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,30,64,361 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,06,02,759 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1669 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 2, ಬಳ್ಳಾರಿ 2, ಬೆಳಗಾವಿ 49, ಬೆಂಗಳೂರು ಗ್ರಾಮಾಂತರ 14 ಬೆಂಗಳೂರು 425, ಬೀದರ್ 0, ಚಾಮರಾಜನಗರ 22, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 51, ಚಿತ್ರದುರ್ಗ 16, ದಕ್ಷಿಣ ಕನ್ನಡ 390, ದಾವಣಗೆರೆ 18, ಧಾರವಾಡ 8, ಗದಗ 3, ಹಾಸನ 113, ಹಾವೇರಿ 0, ಕಲಬುರಗಿ 3, ಕೊಡಗು 73, ಕೋಲಾರ 27, ಕೊಪ್ಪಳ 2, ಮಂಡ್ಯ 35, ಮೈಸೂರು 106, ರಾಯಚೂರು 2, ರಾಮನಗರ 0, ಶಿವಮೊಗ್ಗ 56, ತುಮಕೂರು 69, ಉಡುಪಿ 115, ಉತ್ತರ ಕನ್ನಡ 62, ವಿಜಯಪುರ 1, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    Unmukt Chand ಅತ್ಯಂತ ಕಿರಿಯ ವಯಸ್ಸಿಗೆ ನಿವೃತ್ತಿ ಘೋಷಿಸಿದರು | Oneindia Kannada
    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ರಾಜ್ಯದಲ್ಲಿ ಈವರೆಗೂ 7,62,132 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,59,982 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,33,610 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,95,967 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,26,11,360 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 57,83,629 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,63,64,760 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 77,17,011 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+