ಕರ್ನಾಟಕದಲ್ಲಿ 24868 ಕೊರೊನಾವೈರಸ್ ಪ್ರಕರಣಗಳಷ್ಟೇ ಬಾಕಿ!
ಬೆಂಗಳೂರು, ನವೆಂಬರ್.22: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಒಂದು ದಿನದಲ್ಲಿ 1704 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲೇ 13 ಜನರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11654ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
Coronavirus in India Live Updates: Live: ಕರ್ನಾಟಕದಲ್ಲಿ ಒಂದೇ ದಿನ 1704 ಮಂದಿಗೆ ಕೊರೊನಾವೈರಸ್
ಕೊರೊನಾವೈರಸ್ ಒಟ್ಟು 873046 ಸೋಂಕಿತ ಪ್ರಕರಣಗಳ ಪೈಕಿ 836505 ಸೋಂಕಿತರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲೇ 1537 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 24868 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.
ಎಷ್ಟು ಮಂದಿಗೆ ಕೊರೊನಾವೈರಸ್ ಪರೀಕ್ಷೆ?:
ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 20399 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 106505 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 126904 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 1,02,33,378 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.
ಜಿಲ್ಲೆವಾರು ಕೊರೊನಾವೈರಸ್ ಕೇಸ್?:
ರಾಜ್ಯದಲ್ಲಿ ಒಟ್ಟು 1704 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 04, ಬಳ್ಳಾರಿ 22, ಬೆಳಗಾವಿ 32, ಬೆಂಗಳೂರು ಗ್ರಾಮಾಂತರ 41, ಬೆಂಗಳೂರು 1039, ಬೀದರ್ 6, ಚಾಮರಾಜನಗರ 16, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 11, ಚಿತ್ರದುರ್ಗ 18, ದಕ್ಷಿಣ ಕನ್ನಡ 46, ದಾವಣಗೆರೆ 24, ಧಾರವಾಡ 12, ಗದಗ 10, ಹಾಸನ 44, ಹಾವೇರಿ 25, ಕಲಬುರಗಿ 12, ಕೊಡಗು 10, ಕೋಲಾರ 14, ಕೊಪ್ಪಳ 21, ಮಂಡ್ಯ 32, ಮೈಸೂರು 100, ರಾಯಚೂರು 32, ರಾಮನಗರ 09, ಶಿವಮೊಗ್ಗ 21, ತುಮಕೂರು 14, ಉಡುಪಿ 23, ಉತ್ತರ ಕನ್ನಡ 23, ವಿಜಯಪುರ 27, ಯಾದಗಿರಿ 9, ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.