ಸಿಹಿಸುದ್ದಿ: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕಡಿಮೆಯಾದ ಕೊರೊನಾವೈರಸ್!

ಬೆಂಗಳೂರು, ಜುಲೈ 18: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ ಜನರನ್ನು ಕೊಂಚ ನಿರಾಳರನ್ನಾಗಿಸುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.09ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.10ರಷ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 36 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36157 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 1708 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2463 ಸೋಂಕಿತರು ಗುಣಮುಖರಾಗಿದ್ದಾರೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,83,947ಕ್ಕೆ ಏರಿಕೆಯಾಗಿದೆ. ಈವರೆಗೂ 28,18,476 ಸೋಂಕಿತರು ಗುಣಮುಖರಾಗಿದ್ದು. 29,291 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 386 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,22,189ಕ್ಕೆ ಏರಿಕೆಯಾಗಿದೆ. 9 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,796ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 11,751 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 30,467 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,26,097 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,56,564 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 67,83,658 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,01,00,049 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,68,83,707 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 1708 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 4, ಬಳ್ಳಾರಿ 1, ಬೆಳಗಾವಿ 55, ಬೆಂಗಳೂರು ಗ್ರಾಮಾಂತರ 32, ಬೆಂಗಳೂರು 386, ಬೀದರ್ 8, ಚಾಮರಾಜನಗರ 23, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 105, ಚಿತ್ರದುರ್ಗ 15, ದಕ್ಷಿಣ ಕನ್ನಡ 241, ದಾವಣಗೆರೆ 23, ಧಾರವಾಡ 21, ಗದಗ 1, ಹಾಸನ 121, ಹಾವೇರಿ 8, ಕಲಬುರಗಿ 3, ಕೊಡಗು 45, ಕೋಲಾರ 33, ಕೊಪ್ಪಳ 2, ಮಂಡ್ಯ 53, ಮೈಸೂರು 210, ರಾಯಚೂರು 4, ರಾಮನಗರ 3, ಶಿವಮೊಗ್ಗ 82, ತುಮಕೂರು 64, ಉಡುಪಿ 105, ಉತ್ತರ ಕನ್ನಡ 44, ವಿಜಯಪುರ 1, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    ಮುಂಗಾರು ಅಧಿವೇಶನಕ್ಕೂ ಮುನ್ನ ಹೊಸಮುಖಗಳಿಗೆ ಮಣೆ ಹಾಕಿದ Sonia Gandhi | Oneindia Kannada
    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ರಾಜ್ಯದಲ್ಲಿ ಈವರೆಗೂ 7,55,803 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,24,275 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 8,89,047 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,85,675 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,15,70,536 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 42,05,009 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,19,88,590 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 52,93,430 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+