ಕರ್ನಾಟಕದಲ್ಲಿ ಹೊಸ ದಾಖಲೆ ಬರೆದ ಕೊರೊನಾವೈರಸ್!

ಬೆಂಗಳೂರು, ಮಾರ್ಚ್ 21: ಕರ್ನಾಟಕದಲ್ಲಿ ಕೊರೊನಾವೈರಸ್ 2ನೇ ಅಲೆಯ ವೇಗ ಹೆಚ್ಚಾಗಿದೆ. ನಾಲ್ಕು ತಿಂಗಳ ನಂತರದಲ್ಲಿ ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆಯುತ್ತಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1715 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 970202ಕ್ಕೆ ಏರಿಕೆ ಆಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.

ಒಂದು ದಿನದಲ್ಲಿ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 12434ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 1048 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 944256 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13493ಕ್ಕೆ ಏರಿಕೆಯಾಗಿದೆ.

1715 New Coronavirus Cases Reported in Karnataka Today, State Tally Rise to 970202

ಬೆಂಗಳೂರಿನಲ್ಲೇ ಅತಿಹೆಚ್ಚು ಮಂದಿಗೆ ಸೋಂಕು:

ರಾಜ್ಯದಲ್ಲಿ ಒಟ್ಟು 1715 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 1, ಬಳ್ಳಾರಿ 11, ಬೆಳಗಾವಿ 20, ಬೆಂಗಳೂರು ಗ್ರಾಮಾಂತರ 32, ಬೆಂಗಳೂರು 1039, ಬೀದರ್ 61, ಚಾಮರಾಜನಗರ 4, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 5, ಚಿತ್ರದುರ್ಗ 3, ದಕ್ಷಿಣ ಕನ್ನಡ 54, ದಾವಣಗೆರೆ 8, ಧಾರವಾಡ 24, ಗದಗ 5, ಹಾಸನ 40, ಹಾವೇರಿ 1, ಕಲಬುರಗಿ 41, ಕೊಡಗು 9, ಕೋಲಾರ 10, ಕೊಪ್ಪಳ 0, ಮಂಡ್ಯ 15, ಮೈಸೂರು 70, ರಾಯಚೂರು 6, ರಾಮನಗರ 1, ಶಿವಮೊಗ್ಗ 4, ತುಮಕೂರು 38, ಉಡುಪಿ 170, ಉತ್ತರ ಕನ್ನಡ 11, ವಿಜಯಪುರ 20, ಯಾದಗಿರಿ 3 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      ಇಂದು ರಾಜ್ಯ ರಾಜಧಾನಿಯಲ್ಲಿ ರೈತರ ಬೃಹತ್ ಹೋರಾಟ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+