ಕರ್ನಾಟಕ; 1781 ಹೊಸ ಕೋವಿಡ್ ಪ್ರಕರಣ ಪತ್ತೆ
ಬೆಂಗಳೂರು, ನವೆಂಬರ್ 20: ಕರ್ನಾಟಕದಲ್ಲಿ 1,781 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 24,752.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಇದುವರೆಗೂ 8,33,169 ಜನರು ಗುಣಮುಖರಾಗಿದ್ದಾರೆ.
ಶುಕ್ರವಾರ ರಾಜ್ಯದಲ್ಲಿ 17 ಜನರು ಮೃತಪಟ್ಟಿದ್ದಾರೆ, ಇದುವರೆಗೂ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 11,621. ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ 539 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ನವೆಂಬರ್ 20ರಂದು 17,811 ಆಂಟಿಜೆನ್, 103801 ಆರ್‌ಟಿಪಿಸಿಆರ್ ಸೇರಿ ಒಟ್ಟು 1,21,612 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಇದುವರೆಗೂ ನಡೆಸಿದ ಪರೀಕ್ಷೆಗಳ ಸಂಖ್ಯೆ 9981137.
ಯಾವ ಜಿಲ್ಲೆಯಲ್ಲಿ ಎಷ್ಟು? : ಶುಕ್ರವಾರ ಬೆಂಗಳೂರು ನಗರದಲ್ಲಿ 1067 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,61,654. ಸಕ್ರಿಯ ಪ್ರಕರಣಗಳ ಸಂಖ್ಯೆ 17,663.
ಬಳ್ಳಾರಿಯಲ್ಲಿ 54, ಬೆಳಗಾವಿಯಲ್ಲಿ 38, ಬೆಂಗಳೂರು ಗ್ರಾಮಾಂತರ 66, ಚಿತ್ರದುರ್ಗ 33, ದಕ್ಷಿಣ ಕನ್ನಡ 36, ಹಾಸನ 28, ಮಂಡ್ಯ 66, ಮೈಸೂರು 46, ತುಮಕೂರು 48 ಹೊಸ ಪ್ರಕರಣಗಳು ಇಂದು ದಾಖಲಾಗಿವೆ.












Click it and Unblock the Notifications