ಕರ್ನಾಟಕದಲ್ಲಿ ಮತ್ತೆ 1785 ಕೊರೊನಾ ಪ್ರಕರಣಗಳು ದೃಢ

ಬೆಂಗಳೂರು, ಆಗಸ್ಟ್ 05: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದಿನ ಆರೋಗ್ಯ ಇಲಾಖೆ ವರದಿಯಲ್ಲಿ ಕೊರೊನಾ ಹೊಸ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡಿದೆ.

ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಹಾಗೂ ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಅದರ ಪರಿಣಾಮ ಕಂಡುಬರುತ್ತಿದೆ. ನಿನ್ನೆಗಿಂತ ಇಂದು ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಹೊಸ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕರ್ನಾಟಕದ ಆತಂಕಕ್ಕೆ ಕಾರಣವಾಗಿದೆ. ಇದೇ ವೇಳೆ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಬಾರ್ಡರ್‌ಗಳಲ್ಲಿ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

1785 New Covid- 19 Positive Cases Reported In Karnataka On August 4th

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 1785 ಕೊರೊನಾ ಸೋಂಕು ಪತ್ತೆಯಾಗಿದ್ದು, 1651 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 25 ಆಗಿದ್ದು, ಸಾವಿನ ಪ್ರಮಾಣ ಕೊಂಚ ಕಡಿಮೆಯಾಗಿದೆ.

ರಾಜ್ಯದಲ್ಲಿ ಈವರೆಗೆ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 29,13,512ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿನ ಪ್ರಕರಣಗಳ ಸಂಖ್ಯೆ- 36,705 ಆಗಿದೆ. ಇಲ್ಲಿಯವರೆಗೆ ಒಟ್ಟು 28,52,368 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದ ಪಾಸಿಟಿವಿಟಿ ದರ ಶೇ. 1.10ಕ್ಕೆ ಇಳಿಕೆಯಾಗಿದ್ದು, ಕೋವಿಡ್ ಡೆತ್ ರೇಟ್ ಶೇ.1.40ರಷ್ಟಾಗಿದೆ. ಇದು ನಿನ್ನೆಯ ವರದಿಗಿಂತ ಕಡಿಮೆಯಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ವರದಿ ಮಾಡಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳ ಕೋವಿಡ್ ವರದಿ

ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 414 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, ಇದು ಹಿಂದಿನ ದಿನಕ್ಕಿಂತ ಇಂದು 3 ಪ್ರಕರಣಗಳು ಜಾಸ್ತಿಯಾಗಿದೆ. ಬೆಂಗಳೂರಿನ ಒಟ್ಟು ಸೋಂಕಿತರ ಸಂಖ್ಯೆ 12,29,340ಕ್ಕೆ ಏರಿದ್ದರೆ, ಸಕ್ರಿಯ ಪ್ರಕರಣಗಳು 8560 ಇವೆ. ಇಂದು 554 ಸೋಂಕಿತರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ತರಲಾಗಿದೆ.

ಇನ್ನು ಕೇರಳ ಗಡಿ ಹಂಚಿಕೊಂಡಿರುವ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ 3337 ಪ್ರಕರಣಗಳು, ಮೈಸೂರು ಜಿಲ್ಲೆಯಲ್ಲಿ 105 ಪ್ರಕರಣಗಳು, ಉಡುಪಿ ಜಿಲ್ಲೆಯಲ್ಲಿ 134 ಪ್ರಕರಣಗಳು, ತುಮಕೂರು ಜಿಲ್ಲೆಯಲ್ಲಿ 49 ಪ್ರಕರಣಗಳು, ಬೆಳಗಾವಿ 27, ಶಿವಮೊಗ್ಗ 35 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ.

ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 40, ಚಿಕ್ಕಮಗಳೂರು 97, ಹಾಸನ 125, ಕೊಡಗು 100, ಕೋಲಾರ 57, ಮಂಡ್ಯ ಜಿಲ್ಲೆಯಲ್ಲಿ 46 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಬಾಗಲಕೋಟೆ 6, ಬಳ್ಳಾರಿ 6, ಬೀದರ್ 1 ಪ್ರಕರಣಗಳು ಪತ್ತೆಯಾಗಿವೆ. ಚಾಮರಾಜನಗರ 44, ಚಿಕ್ಕಬಳ್ಳಾಪುರ 12, ಚಿತ್ರದುರ್ಗ 26, ಧಾರವಾಡ 10, ಗದಗ 5, ಹಾವೇರಿ 3, ಕಲಬುರಗಿ 9, ಕೊಪ್ಪಳ 7, ದಾವಣಗೆರೆಯಲ್ಲಿ 10 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 60 ಸೋಂಕು ಪ್ರಕರಣಗಳು, ಯಾದಗಿರಿಯಲ್ಲಿ 0, ರಾಯಚೂರು ಜಿಲ್ಲೆಯಲ್ಲಿ 7 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಒಂದೇ ದಿನ 42,982 ಮಂದಿಗೆ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,18,12,114ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 533 ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4,26,290ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೂ 3,09,74,748 ಸೋಂಕಿತರು ಗುಣಮುಖರಾಗಿದ್ದಾರೆ. 48,93,42,295 ಮಂದಿ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ.

ಸಾರ್ವಜನಿಕರಿಗೆ ಮನವಿ:
ಕೋವಿಡ್- 19 ಸೋಂಕಿತ ವ್ಯಕ್ತಿಯೊಂದಿಗೆ ವೈಯಕ್ತಿಕ ಸಂಪರ್ಕ ಹೊಂದಿದ್ದಲ್ಲಿ, ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರುವುದು ಹಾಗೂ ರೋಗ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳುವುದು ಅಥವಾ 14410 ಆಪ್ತಮಿತ್ರ ಆರೋಗ್ಯ ಸಹಾಯವಾಣಿಗೆ ಕರೆಮಾಡಬೇಕೆಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೋವಿಡ್‍ನ ಸೂಕ್ತ ನಡವಳಿಕೆಗಳಾದ, ವೈಯ್ಯಕ್ತಿಕ ನೈರ್ಮಲ್ಯ, ಮೂಗು ಮತ್ತು ಬಾಯಿ ಎರಡನ್ನೂ ಆವರಿಸುವ ಮುಖಕವಚವನ್ನು ಧರಿಸಿ, ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ / ಟಿಶ್ಯೂ ಪೇಪರನ್ನು ಬಳಸಿ, ಆಗಾಗ ಸಾಬೂನು ಮತ್ತು ನೀರಿನಿಂದ ಕೈಗಳನ್ನು ತೊಳೆದುಕೊಳ್ಳಿ.

Recommended Video

      ಬೆಳ್ಳಿ ಗೆಲ್ಲೋದಕ್ಕೆ ನಾನು ಟೋಕಿಯೋಗೆ ಬರಲಿಲ್ಲ ಎಂದು ನಿರಾಸೆಯಾದ ಪೈಲ್ವಾನ್ | oneindia kannada

      ಕೈ ಸ್ವಚ್ಛಗೊಳಿಸುವ ದ್ರಾವಣ (ಸ್ಯಾನಿಟೈಸರ್) ಬಳಸುವುದರೊಂದಿಗೆ, ದೈಹಿಕ ಅಂತರವನ್ನು ಪಾಲಿಸಿ, ಸಾಮೂಹಿಕ ಸಾಮಾಜಿಕ ಗುಂಪು-ಕೂಟಗಳಿಗೆ ಹಾಜರಾಗುವುದನ್ನು ನಿಷೇಧಿಸುವುದರ ಮೂಲಕ ಕೋವಿಡ್- 19ರ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+