Get Updates
Get notified of breaking news, exclusive insights, and must-see stories!

ತಂಬಾಕು ಮೇಲಿನ ಶೇ18ರಷ್ಟು ಅಬಕಾರಿ ಸುಂಕಕ್ಕೆ ಬ್ರೇಕ್: ಕರ್ನಾಟಕದ ಬೆಳೆಗಾರರು ನಿರಾಳ

ನವದೆಹಲಿ: ತಂಬಾಕು ಮೇಲಿನ ಶೇ18ರಷ್ಟು ಅಬಕಾರಿ ಸುಂಕವನ್ನು ವಾಪಸ್ ಪಡೆಯಲಾಗಿದೆ. ಈ ಮೂಲಕ ಕೇಂದ್ರ ಸರ್ಕಾರವು ಕರ್ನಾಟಕದ ಜನರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮಧ್ಯಪ್ರವೇಶದಿಂದ ಇದು ಸಾಧ್ಯವಾಗಿದೆ. ಇನ್ನು ಇದರಿಂದ ಕರ್ನಾಟಕದ ಹುಣಸೂರು, ಪಿರಿಯಾಪಟ್ಟಣ ಸೇರಿದಂತೆ ವಿವಿಧ ಭಾಗದ ತಂಬಾಕು ಬೆಳೆಗಾರರಿಗೆ ಅನುಕೂಲ ಆಗಲಿದೆ.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಯತ್ನದ ಫಲವಾಗಿ ಎಫ್‌ಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರಕಾರ ತೆಗೆದು ಹಾಕಿದೆ. ಈ ತಂಬಾಕಿನ ಮೇಲೆ ಶೇಕಡ 18ರಷ್ಟು ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ದೂರವೇ ಉಳಿದಿದ್ದರು. ಇದರಿಂದ ಬೆಳೆದ ಬೆಳೆ ಮಾರಾಟವಾಗದೆ ರಾಜ್ಯದ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ. ಕೋಟೆ, ಅರಕಲಗೂಡು ಸೇರಿದಂತೆ ವಿವಿಧ ಭಾಗಗಳಲ್ಲಿನ ತಂಬಾಕು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಇದೀಗ ಕೇಂದ್ರ ಸರ್ಕಾರದ ನಿರ್ಧಾರದಿಂದ ತಂಬಾಕು ಬೆಳೆ ಮಾರಾಟಗಾರರು ನಿಟ್ಟುಸಿರು ಬಿಡುವಂತಾಗಿದೆ.

18 Excise Duty Break on Tobacco Brings Major Relief to Karnataka Growers

ಬೆಳೆಗಾರರು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತಮ್ಮ ಸಂಕಷ್ಟ ತೋಡಿಕೊಂಡಿದ್ದರು. ಈ ಸಂಬಂಧ ಸಚಿವರು ಬೆಂಗಳೂರಿನ ತಂಬಾಕು ಮಂಡಳಿ ವ್ಯಸ್ಥಾಪಕ ನಿರ್ದೇಶಕರು ಮತ್ತು ವಿಶಾಖಪಟ್ಟಣಂ ವಿಭಾಗದ ಕೇಂದ್ರೀಯ ಅಬಕಾರಿ ಮತ್ತು ಜಿಎಸ್‌ಟಿ ಮುಖ್ಯ ಆಯುಕ್ತರ ಜತೆ ನಡೆಸಲಾಗಿದ್ದ ಪತ್ರ ವ್ಯವಹಾರಗಳ ಕುರಿತ ಎಲ್ಲಾ ಮಾಹಿತಿಯನ್ನೂ ಪಡೆದುಕೊಂಡಿದ್ದರು.

ನಂತರ ಸಚಿವರು ಈ ವಿಷಯವನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರ ಗಮನಕ್ಕೆ ತಂದು, ತಂಬಾಕು ಮೇಲಿನ ಅಬಕಾರಿ ಸುಂಕವನ್ನು ರದ್ದು ಮಾಡಬೇಕು ಎಂದು ಮನವಿ ಮಾಡಿದ್ದರು. ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತಂಬಾಕು ಮೇಲಿನ ಅಬಕಾರಿ ಸುಂಕ ವಿನಾಯಿತಿ ನಿರ್ಧಾರವನ್ನು ತೆಗೆದುಕೊಂಡಿ ದ್ದಾರೆ.

ಈ ಸಂಬಂಧ ಫೆಬ್ರವರಿ 1ರಂದು ಆದೇಶ ಹೊರಡಿಸಿರುವ ತಂಬಾಕು ಮಂಡಳಿಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಬಕಾರಿ ಸುಂಕವನ್ನು ಹಿಂಪಡೆಯಲಾಗಿದೆ ಹಾಗೂ ಫೆಬ್ರವರಿ 5ರಿಂದಲೇ ಹರಾಜು ಪ್ರಕ್ರಿಯೆ ಆರಂಭ ಮಾಡುವಂತೆ ನಿರ್ದೇಶನ ನೀಡಿದೆ.

ಕೇಂದ್ರಕ್ಕೆ ಎಚ್.ಡಿ ಕುಮಾರಸ್ವಾಮಿ ಧನ್ಯವಾದ

ತಂಬಾಕು ಹರಾಜು ವಿಷಯಕ್ಕೆ ಸಂಬಂಧಿಸಿ ತಮ್ಮ ಮನವಿಗೆ ಸ್ಪಂದಿಸಿ ಬೆಳೆಗಾರರ ಪರವಾಗಿ ಕ್ರಮ ವಹಿಸಿರುವುದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಚಿವ ಕುಮಾರಸ್ವಾಮಿ ಅವರು ಧನ್ಯವಾದ ತಿಳಿಸಿದ್ದಾರೆ. ತಮ್ಮ ನಿರ್ಧಾರದಿಂದ ತಂಬಾಕು ಬೆಳೆಗಾರರರಿಗೆ ದೊಡ್ಡ ಮಟ್ಟದಲ್ಲಿ ಸಹಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ, ಈ ವಿಷಯವಾಗಿ ಮಾಜಿ ಮಂತ್ರಿಗಳಾದ ಸಾ.ರಾ. ಮಹೇಶ್, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ, ಅರಕಲಗೂಡು ಶಾಸಕ ಎ. ಮಂಜು, ಪಿರಿಯಾಪಟ್ಟಣ ಮಾಜಿ ಶಾಸಕ ಮಹದೇವು ಹಾಗೂ ಹೆಚ್.ಡಿ. ಕೋಟೆಯ ಜೆಡಿಎಸ್‌ ಪಕ್ಷದ ಹಿರಿಯ ಮುಖಂಡ ಕೃಷ್ಣ ನಾಯಕ್‌ ಮುಂತಾದವರು ನನ್ನೊಂದಿಗೆ ಚರ್ಚೆ ನಡೆಸಿದ್ದರು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Tobacco: ತಂಬಾಕು ಸುಂಕ ಹಿನ್ನೆಲೆ ಏನು

ತಂಬಾಕು ಮೇಲೆ ಅಬಕಾರಿ ಸುಂಕ ಮತ್ತು ಜಿಎಸ್‌ಟಿ ದರ ಏರಿಕೆ ವಿರೋಧಿಸಿ ತಂಬಾಕು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರಲು ಖರೀದಿ ಕಂಪನಿಗಳು ನಿರ್ಧರಿಸಿದ್ದವು. ಇದರಿಂದ ಹರಾಜು ಪ್ರಕ್ರಿಯೆ ಸ್ಥಗಿತಗೊಂಡು ಮಾರುಕಟ್ಟೆ ಬಂದ್ ಆಗಿದ್ದವು. ರೈತರು ತೀವ್ರ ಸಂಕಷ್ಟಕ್ಕೆ ತುತ್ತಾಗಿದ್ದರು.
ಖರೀದಿ ಕಂಪನಿಗಳು ತಮ್ಮ ಮೇಲೆ ವಿಧಿಸಿರುವ ಅನುತ್ಪಾದಕ ತಂಬಾಕಿಗೆ ಅಬಕಾರಿ ಸುಂಕ ಹಾಗೂ ತಂಬಾಕು ಉತ್ಪನ್ನಗಳಿಗೆ ಜಿಎಸ್‌ಟಿ ಏರಿಕೆಯ ಹಿನ್ನಲೆಯಲ್ಲಿ ತಂಬಾಕು ಖರೀದಿ ಕಂಪನಿಗಳು ತಾತ್ಕಾಲಿಕವಾಗಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿವೆ.

ಇದರಿಂದಾಗಿ ಮಾರುಕಟ್ಟೆ ಬಂದ್ ಆಗಿದ್ದು, ರೈತರು ಕಷ್ಟಪಟ್ಟು ಬೆಳೆದ ತಂಬಾಕು ಒಣಗುತ್ತಿದೆ. ದಿನದಿನಕ್ಕೂ ಬೆಲೆ ಈಲಿಮುಖವಾಗುತ್ತುದೆ. ಈ ನಡುವೆ ಹರಾಜು ಪ್ರಕ್ರಿಯೆಯಲ್ಲಿ ತಾತ್ಕಾಲಿಕವಾಗಿ ಭಾಗವಹಿಸುವುದಿಲ್ಲವೆಂದು ಖರೀದಿದಾರರು ಘೋಷಿಸಿದ್ದರು. ಬೆಳೆಗಾರರು ತೊಂದರೆ ಅನುಭವಿಸಬಾರದು ಎನ್ನುವ ಕಾರಣಕ್ಕೆ ಸಚಿವ ಕುಮಾರಸ್ವಾಮಿ ಅವರು ಮಧ್ಯ ಪ್ರವೇಶಿಸಿದ್ದರು.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು, ನನ್ನ ಮನವಿಗೆ ಸ್ಪಂದಿಸಿದ ಕೇಂದ್ರ ಹಣಕಾಸು ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಹರಾಜು ಪ್ರಕ್ರಿಯೆ ಆರಂಭವಾಗಿ ತಂಬಾಕು ಬೆಳೆಗಾರರಿಗೆ ಅನುಕೂಲ ಆಗುತ್ತಿರುವುದು ಸಂತೋಷದ ಸಂಗತಿ. ನರೇಂದ್ರ ಮೋದಿ ಅವರ ಸರ್ಕಾರವು ಸದಾ ರೈತಪರ ಎನ್ನುವುದಕ್ಕೆ ಈ ಕ್ರಮವು ಉತ್ತಮ ಉದಾಹರಣೆ ಆಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+