ಕರಾಳ ಶುಕ್ರವಾರ, ಅಪಘಾತಕ್ಕೆ 18 ಜನರು ಬಲಿ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 19 : ರಾಜ್ಯದ ಮೂರು ಜಿಲ್ಲೆಗಳಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 18 ಜನರು ಮೃತಪಟ್ಟಿದ್ದಾರೆ. ಚಿತ್ರದುರ್ಗ, ಗದಗ ಮತ್ತು ಹಾಸನ ಜಿಲ್ಲೆಯಲ್ಲಿ ಈ ಅಪಘಾತಗಳು ನಡೆದಿವೆ. ಚಿತ್ರದುರ್ಗದಲ್ಲಿ ಸಂಭವಿಸಿದ ಅಪಘಾತದಲ್ಲಿ 12 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹಾಸನ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಂಡೀಹಳ್ಳಿ ಸಮೀಪ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲೂ ಬಂಟ್ವಾಳ ಮೂಲದವರಾಗಿದ್ದು, ಬೆಂಗಳೂರಿನಿಂದ ಮೂಡಬಿದಿರೆಗೆ ತೆರಳುತ್ತಿದ್ದರು. [ಅಪಘಾತದಲ್ಲಿ ಮೃತಪಟ್ಟ ಟೆಕ್ಕಿ ದೇಹ ಆಸ್ಪತ್ರೆಗೆ ದಾನ]

chitradurga

ಮೃತಪಟ್ಟವರನ್ನು ಜೈಕೀರ್ತಿ ಇಂದ್ರ (55), ವಾಗೇಶ್ವರಿ (50) ಮತ್ತು ಪ್ರಶಾಂತ್ (30) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಶವಗಳು ಒಳಗೆ ಸಿಲುಕಿಕೊಂಡಿದ್ದವು. ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. [ದೇಹ ಎರಡು ತುಂಡಾದರೂ ಕಣ್ಣು ದಾನ ಮಾಡಿ ಬೆಳಕಾದರು]

ಗದಗ ವರದಿ : ಬೈಕ್‌ಗೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದು ಮೂರು ಜನರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿರಹಟ್ಟಿ ತಾಲೂಕಿನ ಚಿಕ್ಕಸವಣೂರು-ನೆಲೋಗಲ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಜಿತ್ (35), ಮಲ್ಲೇಶಪ್ಪ (55), ಫಕ್ಕಿಲೇಶ್ (45) ಎಂದು ಗುರುತಿಸಲಾಗಿದೆ. ಶಿರಹಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿತ್ರದುರ್ಗ : ಶುಕ್ರವಾರ ಮುಂಜಾನೆ ಚಿತ್ರದುರ್ಗ ತಾಲೂಕಿನ ಮಾಡಗನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಲಾರಿ ಮತ್ತು ಟಾಟಾ ಏಸ್ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ. ಟಾಟಾ ಏಸ್‌ಗೆ ಡಿಕ್ಕಿ ಹೊಡೆದ ಲಾರಿ, ಅದರ ಮೇಲೆ ಉರುಳಿ ಬಿದ್ದಿದೆ. ಇದರಿಂದಾಗಿ ವಾಹನದಲ್ಲಿದ್ದ 12 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. [ಅಪಘಾತದ ವರದಿ ಇಲ್ಲಿದೆ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
18 people were killed in road accident at Karnataka on Friday, February 19, 2016. 12 people killed in Chitradurga.
Please Wait while comments are loading...