ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಪಾಸಿಟಿವ್: ಅಧಿವೇಶನಕ್ಕೆ ಗೈರಾಗಲಿದ್ದಾರೆ 18 ಶಾಸಕರು

|
Google Oneindia Kannada News

ಬೆಂಗಳೂರು, ಸೆ. 21: ಇಂದಿನಿಂದ ವಿಧಾನ ಮಂಡಲ ಮಳೆಗಾಲದ ಅಧಿವೇಶನ ಆರಂಭವಾಗುತ್ತಿದೆ. 10 ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕೆ ಮೊದಲ ದಿನವೇ 18ಕ್ಕು ಹೆಚ್ಚು ಶಾಸಕರು ಗೈರಾಗಲಿದ್ದಾರೆ. ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಎಲ್ಲರೂ ಸದನಕ್ಕೆ ಗೈರುಹಾಜರಾಗಲಿದ್ದು, ಅವರಲ್ಲಿ ಐವರು ಸಚಿವರೂ ಸೇರಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ಹಾಗೂ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದೆ.

ಸಚಿವರು, ಶಾಸಕರಿಗೂ ಕೋವಿಡ್ ನೆಗಟಿವ್ ಪರೀಕ್ಷಾ ವರದಿ ಕಡ್ಡಾಯಸಚಿವರು, ಶಾಸಕರಿಗೂ ಕೋವಿಡ್ ನೆಗಟಿವ್ ಪರೀಕ್ಷಾ ವರದಿ ಕಡ್ಡಾಯ

ಜೊತೆಗೆ 13 ಶಾಸಕರಿಗೂ ಕೊರೊನಾ ವೈರಸ್ ಸೋಂಕಿರುವುದು ಪತ್ತೆಯಾಗಿದೆ. ಹೀಗಾಗಿ ಶಾಸಕರಾದ ಎನ್.ಎ. ಹ್ಯಾರಿಸ್, ಎಚ್.ಪಿ. ಮಂಜುನಾಥ, ಕೆ. ಮಹಾದೇವ, ಬಿ. ನಾರಾಯಣ ರಾವ್, ಡಿ.ಎಸ್. ಹುಲಗೇರಿ, ಬಸನಗೌಡ ದದ್ದಲ್, ವೆಂಕಟರಾವ್ ನಾಡಗೌಡ, ಪ್ರಿಯಾಂಕ್ ಖರ್ಗೆ, ಉಮಾನಾಥ್ ಕೊಟ್ಯಾನ್, ಡಿ.ಸಿ. ಗೌರಿಶಂಕರ, ಎಂ.ಪಿ. ಕುಮಾರಸ್ವಾಮಿ, ಕುಸುಮಾ ಶಿವಳ್ಳಿ ಹಾಗೂ ಬಿ.ಕೆ. ಸಂಗಮೇಶ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಗೈರಯ ಹಾರಜರಾಗುತ್ತಿದ್ದಾರೆ.

Eighteen MLAs not Attending Karnataka Legislative Assembly Session because of Coronavirus Positive

ಇತಿಹಾಸ ನಿರ್ಮಿಸಲಿದೆ ಈ ಮಳೆಗಾಲದ ವಿಧಾನ ಮಂಡಲ ಅಧಿವೇಶನ!ಇತಿಹಾಸ ನಿರ್ಮಿಸಲಿದೆ ಈ ಮಳೆಗಾಲದ ವಿಧಾನ ಮಂಡಲ ಅಧಿವೇಶನ!

Recommended Video

8 ಜನ ರಾಜ್ಯಸಭಾ ಸದಸ್ಯರು ಅಮಾನತು !! | Oneindia Kannada

ಕೊರೊನಾ ವೈರಸ್ ಸೋಂಕು ಪಾಸಿಟಿವ್ ಆಗಿರುವವರು ಅಧಿವೇಶನದಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ಈಗಾಗಲೇ ವಿಧಾನಸಭೆ ಸಚಿವಾಲಯ ಸೂಚಿಸಿದೆ. ಹೀಗಾಗಿ ಪ್ರಮುಖ ವಿಧೇಯಕಗಳನ್ನು ಮತಕ್ಕೆ ಹಾಕುವ ಸಂದರ್ಭ ಬಂದಲ್ಲಿ ಏನು ಮಾಡಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ.

English summary
Today Karnataka assembly Monsoon session begins. More than 18 legislators will be absent on the first day of the 10-day session. All five of them, including ministers, will be absent in the wake of the Covid infection positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X