ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಕಿಂಗ್: ಕರ್ನಾಟಕದಲ್ಲಿ ಏರಿಕೆಯಾಗುತ್ತಿರುವ ಕೊರೊನಾವೈರಸ್!

|
Google Oneindia Kannada News

ಬೆಂಗಳೂರು, ಆಗಸ್ಟ್ 12: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿನ ಏರಿಳಿತ ಮುಂದುವರಿದಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.15ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.61ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1857 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1950 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 30 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36911 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಲಾಕ್‌ಡೌನ್ ಆಗಬಾರದೆಂದರೆ ಸರಿಯಾಗಿ ಕೆಲಸ ಮಾಡಿ; ಬಸವರಾಜ ಬೊಮ್ಮಾಯಿಲಾಕ್‌ಡೌನ್ ಆಗಬಾರದೆಂದರೆ ಸರಿಯಾಗಿ ಕೆಲಸ ಮಾಡಿ; ಬಸವರಾಜ ಬೊಮ್ಮಾಯಿ

ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2924732ಕ್ಕೆ ಏರಿಕೆಯಾಗಿದೆ. ಒಟ್ಟು 2865067 ಸೋಂಕಿತರು ಗುಣಮುಖರಾಗಿದ್ದು. 22728 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ರಾಜಧಾನಿಯಲ್ಲಿ 321 ಜನರಿಗೆ ಕೊವಿಡ್-19

ರಾಜ್ಯ ರಾಜಧಾನಿಯಲ್ಲಿ 321 ಜನರಿಗೆ ಕೊವಿಡ್-19

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 321 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1231795ಕ್ಕೆ ಏರಿಕೆಯಾಗಿದೆ. 5 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15928ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8193 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 34003 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,27,272 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,61,275 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 75,04,870 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,29,28,557 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,04,33,427 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1857 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 11, ಬಳ್ಳಾರಿ 3, ಬೆಳಗಾವಿ 45, ಬೆಂಗಳೂರು ಗ್ರಾಮಾಂತರ 44 ಬೆಂಗಳೂರು 321, ಬೀದರ್ 0, ಚಾಮರಾಜನಗರ 22, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 107, ಚಿತ್ರದುರ್ಗ 30, ದಕ್ಷಿಣ ಕನ್ನಡ 475, ದಾವಣಗೆರೆ 20, ಧಾರವಾಡ 9, ಗದಗ 4, ಹಾಸನ 123, ಹಾವೇರಿ 1, ಕಲಬುರಗಿ 4, ಕೊಡಗು 93, ಕೋಲಾರ 24, ಕೊಪ್ಪಳ 0, ಮಂಡ್ಯ 46, ಮೈಸೂರು 116, ರಾಯಚೂರು 2, ರಾಮನಗರ 3, ಶಿವಮೊಗ್ಗ 50, ತುಮಕೂರು 34, ಉಡುಪಿ 191, ಉತ್ತರ ಕನ್ನಡ 68, ವಿಜಯಪುರ 2, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

ಮೊದಲು ಕನ್ನಡಿಗ ನಾನು ನಂತರ ಭಾರತೀಯ | ನನಗೆ ಮೊದಲು ನನ್ನ ತಾಯಿ ಮುಖ್ಯ | H D kumaraswamy | Oneindia Kannada
ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,62,004 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,58,554 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,33,375 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,90,679 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,25,83,585 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 57,46,580 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,62,29,620 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 76,41,784 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
1857 New Coronavirus Cases Reported in Karnataka Today, State Tally Rise to 2924732.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X