ರಾಜ್ಯದಲ್ಲಿ 1869 ಕೊರೊನಾ ಪ್ರಕರಣ ದಾಖಲು; ಚೇತರಿಕೆ ಸಂಖ್ಯೆ ಏರಿಕೆ

ಬೆಂಗಳೂರು, ಜುಲೈ 17: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1869 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 432 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಗದಗದಲ್ಲಿ ಕೊರೊನಾ ಪ್ರಕರಣ ಶೂನ್ಯವಾಗಿದೆ.

ಒಂದು ದಿನದಲ್ಲಿ ಸೋಂಕಿನಿಂದ 42 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 36121 ಆಗಿದೆ. 24 ಗಂಟೆಗಳಲ್ಲಿ 3144 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

1869 New Coronavirus Cases Reported In Karnataka On July 17

ಶನಿವಾರದ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಒಟ್ಟಾರೆ 2882239ಕ್ಕೆ ಏರಿಕೆಯಾಗಿದೆ. ಈವರೆಗೂ 2816013 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸದ್ಯ 30082 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ಸಂಖ್ಯೆ: ರಾಜ್ಯದಲ್ಲಿ 1869 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಪೈಕಿ ಬಾಗಲಕೋಟೆ 4, ಬಳ್ಳಾರಿ 11, ಬೆಳಗಾವಿ 97, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು 432, ಬೀದರ್ 1, ಚಾಮರಾಜನಗರ 15, ಚಿಕ್ಕಬಳ್ಳಾಪುರ 13, ಚಿಕ್ಕಮಗಳೂರು 101, ಚಿತ್ರದುರ್ಗ 15, ದಕ್ಷಿಣ ಕನ್ನಡ 218, ದಾವಣಗೆರೆ 21, ಧಾರವಾಡ 24, ಗದಗ 0, ಹಾಸನ 173, ಹಾವೇರಿ 14, ಕಲಬುರಗಿ 6, ಕೊಡಗು 51, ಕೋಲಾರ 46, ಕೊಪ್ಪಳ 1, ಮಂಡ್ಯ 37, ಮೈಸೂರು 207, ರಾಯಚೂರು 3, ರಾಮನಗರ 11, ಶಿವಮೊಗ್ಗ 83, ತುಮಕೂರು 92, ಉಡುಪಿ 94, ಉತ್ತರ ಕನ್ನಡ 49, ವಿಜಯಪುರ 2, ಯಾದಗಿರಿ 2 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

Recommended Video

      ದಕ್ಷಿಣ ಆಫ್ರಿಕಾ ಮಾಜಿ ಪ್ರಧಾನಿ ಜುಮಾ ಬಂಧನದ ನಂತರ ಹಿಂಸಾಚಾರ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+