ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ: 2,000 ಸಂಖ್ಯೆಯ ಆಸುಪಾಸಿನಲ್ಲಿ ಕೊರೊನಾವೈರಸ್ ಕಂಟಕ

|
Google Oneindia Kannada News

ಬೆಂಗಳೂರು, ಆಗಸ್ಟ್ 1: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ 2,000ದ ಆಸುಪಾಸಿನಲ್ಲಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.20ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.33ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1875 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1502 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 25 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36587 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಏರಿಕೆ ಸೂಚನೆ ನೀಡುತ್ತಿದೆಯಾ ಆರ್-ಮೌಲ್ಯ!?ಭಾರತದಲ್ಲಿ ಕೊರೊನಾವೈರಸ್ ಏರಿಕೆ ಸೂಚನೆ ನೀಡುತ್ತಿದೆಯಾ ಆರ್-ಮೌಲ್ಯ!?

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2906999ಕ್ಕೆ ಏರಿಕೆಯಾಗಿದೆ. ಒಟ್ಟು 2846244 ಸೋಂಕಿತರು ಗುಣಮುಖರಾಗಿದ್ದು. 24144 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ 409 ಜನರಿಗೆ ಕೊವಿಡ್-19

ಸಿಲಿಕಾನ್ ಸಿಟಿಯಲ್ಲಿ 409 ಜನರಿಗೆ ಕೊವಿಡ್-19

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 409 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1227748ಕ್ಕೆ ಏರಿಕೆಯಾಗಿದೆ. 8 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15880ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8553 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 30,753 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,24,295 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,55,048 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 71,70,986 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,16,33,560 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,88,04,546 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1875 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 13, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 37 ಬೆಂಗಳೂರು 409, ಬೀದರ್ 1, ಚಾಮರಾಜನಗರ 33, ಚಿಕ್ಕಬಳ್ಳಾಪುರ 23, ಚಿಕ್ಕಮಗಳೂರು 65, ಚಿತ್ರದುರ್ಗ 32, ದಕ್ಷಿಣ ಕನ್ನಡ 410, ದಾವಣಗೆರೆ 17, ಧಾರವಾಡ 23, ಗದಗ 12, ಹಾಸನ 108, ಹಾವೇರಿ 2, ಕಲಬುರಗಿ 9, ಕೊಡಗು 83, ಕೋಲಾರ 35, ಕೊಪ್ಪಳ 1, ಮಂಡ್ಯ 42, ಮೈಸೂರು 146, ರಾಯಚೂರು 1, ರಾಮನಗರ 7, ಶಿವಮೊಗ್ಗ 65, ತುಮಕೂರು 52 ಉಡುಪಿ 162, ಉತ್ತರ ಕನ್ನಡ 46, ವಿಜಯಪುರ 1, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

Weather Forecast : ಹವಾಮಾನ ಇಲಾಖೆಯಿಂದ ಭಾರಿ ಮಳೆ ಸೂಚನೆ! | Oneindia Kannada
ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,58,730 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,44,953 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,25,076 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,45,976 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,20,07,927 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 51,59,195 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,40,68,139 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 65,71,876 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
1875 New Coronavirus Cases Reported in Karnataka Today, State Tally Rise to 2906999.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X