ರಾಜ್ಯಸಭಾ ಚುನಾವಣೆ: 217 ಅರ್ಹ ಮತಗಳ ಪೈಕಿ 188 ಮತಗಳ ಚಲಾವಣೆ
ಬೆಂಗಳೂರು, ಮಾರ್ಚ್ 23: ಸಂಜೆ 4 ಗಂಟೆಗೆ ರಾಜ್ಯಸಭಾ ಚುನಾವಣೆ ಪ್ರಕ್ರಿಯೆ ಮುಗಿದಿದ್ದು ಒಟ್ಟು 224 ಸದಸ್ಯರ ಪೈಕಿ 188 ಮತಗಳು ಚಲಾವಣೆಯಾಗಿದ್ದು ಈಗಾಗಲೇ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.
ಶಾಸಕರ ರಾಜೀನಾಮೆ ಮತ್ತು ನಿಧನದಿಂದಾಗಿ ಖಾಲಿ ಇರುವ ಏಳು ಸ್ಥಾನಗಳನ್ನು ಹೊರತುಪಡಿಸಿದರೆ 217 ಮತದಾರರು ರಾಜ್ಯಸಭೆ ಚುನಾವಣೆಗೆ ಮತದಾನ ಮಾಡಲು ಅರ್ಹತೆ ಹೊಂದಿದ್ದರು.
ಅರ್ಹ ಮತದಾರರ ಪೈಕಿ ಬೇಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ರುದ್ರೇಶಗೌಡ ಮತ ಚಲಾಯಿಸಲಿಲ್ಲ, ಹಾಗೂ ಎಚ್.ಡಿ.ರೇವಣ್ಣ ಮತ್ತು ಸಾ.ರಾ.ಮಹೇಶ್ ಹೊರತು ಪಡಿಸಿ ಜೆಡಿಎಸ್‌ನ 28 ಶಾಸಕರು ಮತದಾನ ಮಾಡದೆ ಮತದಾನ ಬಹಿಷ್ಕರಿಸಿದರು ಹಾಗಾಗಿ ಒಟ್ಟು 188 ಮತಗಳಷ್ಟೆ ಚಲಾವಣೆ ಆಗಿವೆ.

ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿದೆ, ಚುನಾವಣಾಧಿಕಾರಿ ಕಾಂಗ್ರೆಸ್‌ಗೆ ಸಹಕರಿಸುತ್ತಿದ್ದಾರೆ ಎಂದು ಆರೋಪಿಸಿದ ಜೆಡಿಎಸ್ ಪಕ್ಷವು ಚುನಾವಣೆಯನ್ನು ಬಹಿಷ್ಕರಿಸಿತು. ಕಾಗೋಡು ತಿಮ್ಮಪ್ಪ ಮತ್ತು ಚಿಂಚನಸೂರು ಅವರು ತಪ್ಪು ಮತದಾನ ಮಾಡಿದ್ದಕ್ಕೆ ಮತ್ತೆ ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಮುಖಂಡ ರೇವಣ್ಣ ಸೇರಿದಂತೆ ಜೆಡಿಎಸ್ ಶಾಸಕರು ಕೆರಳಿ ವಾಗ್ವಾದ ನಡೆಸಿ ಕೊನೆಗೆ ಚುನಾವಣೆ ಬಹಿಷ್ಕಾರ ಮಾಡಿದರು.
ಈಗ ಚಲಾವಣೆ ಆಗಿರುವ ಮತಗಳ ಅಂದಾಜು ಲೆಕ್ಕ ಹಿಡಿದರೆ ಕಾಂಗ್ರೆಸ್‌ನ ಮೂರೂ ಅಭ್ಯರ್ಥಿಗಳು ಹಾಗೂ ಬಿಜೆಪಿಯ ಒಬ್ಬ ಅಭ್ಯರ್ಥಿ ಅನಾಯಾಸ ಗೆಲುವು ಪಡೆದಿರುವುದು ಗೊತ್ತಾಗುತ್ತದೆ. ಜೆಡಿಎಸ್ ನ ರಾಜ್ಯಸಭಾ ಅಭ್ಯರ್ಥಿ ಫಾರೂಕ್ ಅವರಿಗೆ ಸೋಲಾಗಿದೆ.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications