Breaking: ಕರ್ನಾಟಕದಲ್ಲಿ ಒಂದೇ ದಿನ 1889 ಮಂದಿಗೆ ಕೊರೊನಾ ವೈರಸ್!

ಬೆಂಗಳೂರು, ಜುಲೈ 28: ಭಾರತದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 20 ಸಾವಿರದ ಗಡಿ ದಾಟುತ್ತಿದೆ. ಇದರ ಮಧ್ಯೆ ಕರ್ನಾಟಕದಲ್ಲೂ ಸದ್ದಿಲ್ಲದೇ ಸೋಂಕಿತ ಪ್ರಕರಣಗಳ ಸಂಖ್ಯೆಯು ಏರಿಕೆ ಆಗುತ್ತಿದೆ.

ರಾಜ್ಯದಲ್ಲಿ ಒಂದೇ ದಿನ 1,889 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಇನ್ನು ಇದೇ ಅವಧಿಯಲ್ಲಿ ಮೂವರು ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅದೇ ರೀತಿ 1,587 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕರ್ನಾಟಕದಲ್ಲಿ ಕಡಿಮೆ ಆಯಿತು ಎಂದುಕೊಳ್ಳುವಷ್ಟರಲ್ಲೇ ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9,135ಕ್ಕೆ ತಲುಪಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

1889 New Covid-19 Cases Reported in Karnataka in last 24 Hours

ಬೆಂಗಳೂರಿನಲ್ಲೇ ಅತಿಹೆಚ್ಚು ಪ್ರಕರಣ:

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31,706 ಮಂದಿಗೆ ಕೊರೊನಾವೈರಸ್ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ಪ್ರಮಾಣವು ಶೇ.5.95ರಷ್ಟಾಗಿದೆ. ಕರ್ನಾಟಕದಲ್ಲಿ 1,889 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಖಾತ್ರಿಯಾಗಿದ್ದರೆ, ಅದರಲ್ಲಿ 1,475 ಪ್ರಕರಣ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 1,288 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲೇ 7486 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ಒಂದೇ ದಿನ 18,313 ಮಂದಿಗೆ ಕೋವಿಡ್:

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20557 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 44 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 19,216 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,959,321ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,286,787 ಸೋಂಕಿತರು ಗುಣಮುಖರಾಗಿದ್ದು, 526,211 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 146,323ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,96,783 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 87,40,08,037 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+