ಅಲೆಗಳ ಆಟ: ಕರ್ನಾಟಕದಲ್ಲಿ ಮತ್ತೆ ಶುರುವಾಯಿತಾ ಕೊರೊನಾವೈರಸ್ ಕಾಟ!?

ಬೆಂಗಳೂರು, ಜುಲೈ 30: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಬುಧವಾರ ಮತ್ತು ಗುರುವಾರದ ಅಂಕಿ-ಸಂಖ್ಯೆಗಳ ಮಧ್ಯೆ ಶೇ.34ರಷ್ಟು ಹೆಚ್ಚಳವಾಗಿದ್ದು, ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.30ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.79ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1890 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1631 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 34 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36525 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2903137ಕ್ಕೆ ಏರಿಕೆಯಾಗಿದೆ. ಒಟ್ಟು 2843110 ಸೋಂಕಿತರು ಗುಣಮುಖರಾಗಿದ್ದು. 23478 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ 426 ಜನರಿಗೆ ಕೊವಿಡ್-19

ಸಿಲಿಕಾನ್ ಸಿಟಿಯಲ್ಲಿ 426 ಜನರಿಗೆ ಕೊವಿಡ್-19

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 426 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1226889ಕ್ಕೆ ಏರಿಕೆಯಾಗಿದೆ. 9 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15861ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8467 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 29,143 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,16,054 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,45,197 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 71,09,686 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,14,01,280 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,88,10,966 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1890 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 2, ಬಳ್ಳಾರಿ 20, ಬೆಳಗಾವಿ 103, ಬೆಂಗಳೂರು ಗ್ರಾಮಾಂತರ 17 ಬೆಂಗಳೂರು 426, ಬೀದರ್ 4, ಚಾಮರಾಜನಗರ 27, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 88, ಚಿತ್ರದುರ್ಗ 31, ದಕ್ಷಿಣ ಕನ್ನಡ 345, ದಾವಣಗೆರೆ 4, ಧಾರವಾಡ 9, ಗದಗ 2, ಹಾಸನ 135, ಹಾವೇರಿ 2, ಕಲಬುರಗಿ 6, ಕೊಡಗು 77, ಕೋಲಾರ 28, ಕೊಪ್ಪಳ 1, ಮಂಡ್ಯ 48, ಮೈಸೂರು 142, ರಾಯಚೂರು 1, ರಾಮನಗರ 9, ಶಿವಮೊಗ್ಗ 88, ತುಮಕೂರು 54 ಉಡುಪಿ 155, ಉತ್ತರ ಕನ್ನಡ 47, ವಿಜಯಪುರ 8, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,59,261 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,41,802 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,17,785 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,35,974 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,18,87,736 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 50,30,739 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,35,34,615 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 63,71,235 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+