ಬಾಗಲಕೋಟೆಯಲ್ಲಿ ಒಬ್ಬನಿಂದ 13 ಮಂದಿಗೆ ಕೊರೊನಾ ಪಾಸಿಟಿವ್!

ಬಾಗಲಕೋಟೆ, ಮೇ.06: ಕರ್ನಾಟಕದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬುಧವಾರ 19 ಮಂದಿಗೆ ಕೊರೊನಾ ವೈರಸ್ ತಗಲಿರುವುದು ದೃಢಪಟ್ಟಿದೆ.

ಬುಧವಾರ ಡೆಡ್ಲಿ ಕೊರೊನಾ ವೈರಸ್ ಸೋಂಕಿಗೆ ಬಾಗಲಕೋಟೆ ಅಕ್ಷರಶಃ ನಲುಗಿದೆ. ಒಂದೇ ದಿನ ಜಿಲ್ಲೆಯಲ್ಲಿನ 13 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯು 35 ರಿಂದ 48ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್ ನಿಂದ ರಾಜ್ಯದಲ್ಲಿ ಇದುವರೆಗೂ 30 ಮಂದಿ ಪ್ರಾಣ ಬಿಟ್ಟಿದ್ದಾರೆ. ಇಂದು ರಾಜ್ಯದಲ್ಲಿ ಒಟ್ಟು 19 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ.

ಯಾವ ಜಿಲ್ಲೆಯಲ್ಲೆಷ್ಟು ಕೊರೊನಾ ಕೇಸ್ ಪತ್ತೆ

ಯಾವ ಜಿಲ್ಲೆಯಲ್ಲೆಷ್ಟು ಕೊರೊನಾ ಕೇಸ್ ಪತ್ತೆ

ಬಾಗಲಕೋಟೆಯಲ್ಲಿ ಒಂದೇ ದಿನ 13 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ ಮೂವರಿಗೆ ಬೆಂಗಳೂರಿನಲ್ಲಿ ಇಬ್ಬರಿಗೆ ಹಾಗೂ ಕಲಬುರಗಿಯಲ್ಲಿ ಒಬ್ಬರಿಗೆ ಕೊರೊನಾ ವೈರಸ್ ತಗಲಿದೆ.

ಪೇಶೆಂಟ್ ನಂಬರ್.607 ಬಾಗಲಕೋಟೆಗೆ ಡೇಂಜರ್!

ಪೇಶೆಂಟ್ ನಂಬರ್.607 ಬಾಗಲಕೋಟೆಗೆ ಡೇಂಜರ್!

ಬಾಗಲಕೋಟೆ ಜಿಲ್ಲೆ ಬಾದಾಮಿ ಒಂದರಲ್ಲೇ 13 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಪೇಶೆಂಟ್ ನಂಬರ್.607ರಿಂದಲೇ 13 ಜನರಿಗೂ ಕೊವಿಡ್-19 ಹರಡಿರುವುದು ತಿಳಿದು ಬಂದಿದೆ. ಸೋಂಕಿತರ ಸಂಖ್ಯೆಯಲ್ಲಿನ ಏರಿಕೆಯು ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.

ಕರಾವಳಿಯಲ್ಲಿ ತಾಯಿ-ಮಗಳಿಗೆ ಕೊರೊನಾ ಪಾಸಿಟಿವ್

ಕರಾವಳಿಯಲ್ಲಿ ತಾಯಿ-ಮಗಳಿಗೆ ಕೊರೊನಾ ಪಾಸಿಟಿವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮೂವರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಪೈಕಿ 35 ವರ್ಷದ ತಾಯಿ ಹಾಗೂ 11 ವರ್ಷದ ಮಗಳಲ್ಲಿ ಸೋಂಕು ತಗಲಿರುವುದು ದೃಢಪಟ್ಟಿದೆ. ಇನ್ನು, ಭಟ್ಕಳದಲ್ಲೂ 16 ವರ್ಷದ ಯುವತಿಗೂ ಕೊವಿಡ್-19 ಪಾಸಿಟಿವ್ ಬಂದಿದೆ.

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಬುಧವಾರ ಬೆಳಗಿನ ಬುಲೆಟಿನ್ ಬಿಡುಗಡೆ ನಂತರದಲ್ಲಿ ಬೆಂಗಳೂರಿನಲ್ಲಿ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ. ಬಾಗಲಕೋಟೆಯಲ್ಲಿ 13 ಪ್ರಕರಣಗಳು ಹೊಸದಾಗಿ ಸೇರ್ಪಡೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35ರಿಂದ ಏಕಾಏಕಿ 48ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಮೂವರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 19ರಿಂದ 22ಕ್ಕೆ ಏರಿಕೆಯಾಗಿದೆ. ಇನ್ನು, ರಾಜ್ಯದಲ್ಲಿ 19 ಪ್ರಕರಣಗಳು ಪತ್ತೆಯಾದ ಹಿನ್ನೆಲೆ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+