Government Employees: ಸರ್ಕಾರಿ ನೌಕರರ ಏಳನೇ ವೇತನ ಆಯೋಗಕ್ಕೆ 19000 ಕೋಟಿ: ಸಿದ್ದರಾಮಯ್ಯ ಏನಂದ್ರು?
ಬೆಂಗಳೂರು, ಮಾರ್ಚ್ 08: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಜೆಟ್ ಮಂಡನೆಗೆ ಕುರಿತು ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಪಂಚ ಗ್ಯಾರಂಟಿಗಳಿಂದ ಸಿಎಂ ಕೈ ಕಟ್ಟಿಹಾಕಿದಂತಾಗಿದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರಿ ನೌಕರರ ಏಳನೇ ವೇತನ ಆಯೋಗಕ್ಕೆ 19000 ಕೋಟಿ ನೀಡಲಾಗಿತ್ತು. ಹಾಗಿದ್ದಿದ್ದರೆ, ಆಶಾ ಕಾರ್ಯಕರ್ತರು, ಅರ್ಚಕರು, ಪೈಲ್ವಾನರಿಗೆ ಅತಿಥಿ ಶಿಕ್ಷಕರು ಗೌರವಧನ ಹೆಚ್ಚಳ ಮಾಡಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.
ಕರ್ನಾಟಕದ ಮಾದರಿಯಲ್ಲಿ ಕೇಂದ್ರದಲ್ಲಿ ಜಾರಿ ಮಾಡಿ ಎಂದು ಹೇಳಲು ರಾಜ್ಯ ಬಿಜೆಪಿಯವರಿಗೆ ಧೈರ್ಯವಿಲ್ಲ ಎಂದು ಟೀಕಿಸಿದ ಮುಖ್ಯಮಂತ್ರಿಗಳು, ಬಿಜೆಪಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆ ಇದೆ. ಅಲ್ಪಸಂಖ್ಯಾತರು ಶಿಕ್ಷಣದಿಂದ ವಂಚಿತರು. 75% ಅಲ್ಪಸಂಖ್ಯಾತರಿಗೆ ಹಾಗೂ 25% ಇತರರಿಗೂ ಅವರ ಸಂಸ್ಥೆಯಲ್ಲಿ ಅವಕಾಶನೀಡಿದೆ. ಅಲ್ಪಸಂಖ್ಯಾತರಿಗೆ ಶಿಕ್ಷಣ ನೀಡಿದರೆ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ. ನಾವು ಅವರಂತೆ ಸಬ್ ಕ ಸಾಥ್, ಸಬ್ ಕ ವಿಕಾಸ್ ಎಂದು ಹೇಳುವುದಿಲ್ಲ. ಇದು ಬಹುತ್ವದ ದೇಶ. ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಅದರಲ್ಲಿ ನಮಗೆ ನಂಬಿಗೆ ಇದೆ. ಬಿಜೆಪಿ ಜಾತ್ಯಾತೀತೆಯ ವಿರೋಧಿಗಳು , ಭಾರತ ಬಹುತ್ವದ ದೇಶ, ಯಾವುದೇ ಒಂದು ಧರ್ಮ , ಜಾತಿಗೆ ಸೇರಿಲ್ಲ. ಸಂವಿಧಾನ, ಎಲ್ಲರಿಗೂ ಸಮಾನ ಅವಕಾಶ ನೀಡಬೇಕು ಎಂದು ಹೇಳಿದೆ.

ಬಿಜೆಪಿಯವರು ಸಂವಿಧಾನದ ಆಶಯಗಳನ್ನು ಪಾಲಿಸುವುದಿಲ್ಲ. ಅವರು ಜಾತ್ಯಾತೀತತೆ, ಬಹುತ್ವ, ಹಾಗೂ ಸಂವಿಧಾನದ ವಿರುದ್ಧವಾಗಿದ್ದಾರೆ. ನಮ್ಮ ಬಜೆಟ್ ದೂರದೃಷ್ಟಿಯ, ಸಮಾನತೆ, ಸಾಮಾಜಿಕ ಬೆಳವಣಿಗೆ, ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡಗಳೊಳಗೆ ಬಜೆಟ್ . 94-95 ರಲ್ಲಿ 13 ಸಾವಿರ ಕೋಟಿ ಬಜೆಟ್ , 4 ಲಕ್ಷ ಕೋಟಿಗಳ ಗಾತ್ರಕ್ಕೆ ಎರಿರುವುದು ಸಂತಸದ ತಂದಿದೆ . ಸರ್ವರಿಗೂ ಸಮಪಾಲು, ಸಮಬಾಳು ದೊರಕಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಅಲ್ಪಸಂಖ್ಯಾತರಿಗೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರ ಸಾಕ್ಷರತಾ ಪ್ರಮಾಣ ಎಷ್ಟಿದೆ ಎಂದು ಪ್ರಶ್ನಿಸಿ ಮೀಸಲಾತಿ ನೀಡಿರುವುದು ಧರ್ಮದ ಆಧಾರದ ಮೇಲೆ ಅಲ್ಲ . 2 ಎ, ಎಸ್‌ಸಿ, ಎಸ್‌ಟಿ, ಪ್ರವರ್ಗ 1 ಕೊಟ್ಟಿಲ್ಲವೇ? ಕೇವಲ ಮುಸ್ಲಿಂರದ್ದು ಮಾತ್ರ ಯಾಕೆ ಹೇಳುತ್ತೀರಿ ? ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ಪ್ರತಿಪಕ್ಷಗಳಿಗೆ ಅಲ್ಪಸಂಖ್ಯಾತರನ್ನು ಆಕ್ಷೇಪಿಸುವುದೇ ಕೆಲಸ ಎಂದರು.
ನೀರಾವರಿ ಯೋಜನೆಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಇನ್ನೂ ಹೊರಡಿಸಿಲ್ಲ. ಭದ್ರಾ ಮೇಲ್ದಂಡೆಗೆ 5300 ಕೋಟಿಗಳನ್ನು ಬಜೆಟ್ ನಲ್ಲ ಘೋಷಿಸಿದ್ದರೂ ಈವರೆಗೆ ಅನುದಾನ ಬಿಡುಗಡೆಯಾಗಿಲ್ಲ. 15 ನೇ ಹಣಕಾಸು ಆಯೋಗದಲ್ಲಿ ವಿಶೇಷ ಅನುದಾನ ಕೊಡಲು ಶಿಫಾರಸ್ಸು ಮಾಡಿದ್ದರೂ, ಕೇಂದ್ರ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದ ಬಗ್ಗೆ ಕಳಕಳಿ ಇದ್ದಿದ್ದಲ್ಲಿ ರಾಜ್ಯದ ಶಾಸಕರು, ಸಂಸದರು ಈ ಬಗ್ಗೆ ಪ್ರಶ್ನೆ ಕೇಳಬೇಕಿತ್ತು. ಸರ್ಕಾರ ದೆಹಲಿಯಲ್ಲಿ ಈ ಬಗ್ಗೆ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿಲ್ಲ ಎಂದರು.
ಆಯವ್ಯಯದಲ್ಲಿ ದೊಡ್ಡ ಯೋಜನೆಗಳಿಗೆ ಕೈ ಹಾಕಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಉತ್ತರಿಸಿ, ನೀರಾವರಿಗೆ ಕಳೆದ ವರ್ಷಕ್ಕಿಂತ 2 ಸಾವಿರ ಕೋಟಿ ಹೆಚ್ಚಿನ ಅನುದಾನ, ಬೆಂಗಳೂರು ನಗರಕ್ಕೆ 7ಸಾವಿರ ಕೋಟಿ , ಹೊರವರ್ತುಲ ರಸ್ತೆ , ಸುರಂಗ ಮಾರ್ಗ ಕಾರಿಡಾರ್ ಸೇರಿದಂತೆ ಬೆಂಗಳೂರು ನಗರ ಅಭಿವೃದ್ಧಿಗೆ 54000 ಕೋಟಿ ನೀಡಲಾಗಿದೆ. ಬಂಡವಾಳ ವೆಚ್ಚ 83200 ಕೋಟಿ ಹೆಚ್ಚಳವಾಗಿದ್ದು,ಅಂದರೆ ಶೇ.47.3 ರಷ್ಟು ಆರ್ಥಿಕ ಬೆಳವಣಿಗೆಯಾಗಿದೆ ಎಂದರು.
ಗ್ಯಾರಂಟಿಗಳನ್ನು ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಡಿಬಿಟಿ ಮಾಡಲಾಗುತ್ತಿದ್ದು, ಸಾರ್ವತ್ರಿಕ ಮೂಲ ಆದಾಯ ತತ್ವದ ಆಧಾರದ ಮೇಲೆ ರೂಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 232 ಕೋಟಿಗಳು ವೆಚ್ಚವಾಗುತ್ತಿದೆ. ಜನರಿಗೆ ಆರ್ಥಿಕ ಬಲ ತುಂಬಿದರೆ, ಅವರ ಖರೀದಿ ಶಕ್ತಿಯೂ ಹೆಚ್ಚಿ, ರಾಜ್ಯದ ಆರ್ಥಿಕತೆಯೂ ಬೆಳೆಯುತ್ತದೆ. ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದರು.












Click it and Unblock the Notifications