ಕನ್ನಡಿಗರಿಗೆ ಶಾಕ್: ರಾಜ್ಯದಲ್ಲಿ ಹೊಸ ದಾಖಲೆ ಬರೆದ ಕೊರೊನಾವೈರಸ್!

ಬೆಂಗಳೂರು, ಏಪ್ರಿಲ್ 18: ಕರ್ನಾಟಕದಲ್ಲಿ ಕೊರೊನಾವೈರಸ್ ಎರಡನೇ ಅಲೆಯ ಹರಡುವಿಕೆ ವೇಗ ಮಿತಿಮೀರುತ್ತಿದೆ. ಕಳೆದ 24 ಗಂಟೆಗಳಲ್ಲೇ ಪತ್ತೆಯಾಗಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಕನ್ನಡಿಗರನ್ನು ಬೆಚ್ಚಿ ಬೀಳುವಂತೆ ಮಾಡಿದೆ.

ಒಂದೇ ದಿನ ರಾಜ್ಯದಲ್ಲಿ 19067 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 81 ಜನರು ಕೊವಿಡ್-19 ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದಾರೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 1161065 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಒಂದೇ ದಿನ 4603 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1014152 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 133543 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿನ ತಪಾಸಣೆ ಸಂಖ್ಯೆ

ರಾಜ್ಯದಲ್ಲಿ ಕೊವಿಡ್-19 ಸೋಂಕಿನ ತಪಾಸಣೆ ಸಂಖ್ಯೆ

ಕೊರೊನಾವೈರಸ್ ಸೋಂಕಿನ ಪತ್ತೆಗೆ ಎರಡು ವಿಧಾನಗಳಲ್ಲಿ ಮಾದರಿಗಳ ತಪಾಸಣೆ ನಡೆಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 13589 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದ್ದು, 1325056 ಜನರಿಗೆ RT-PCR ತಪಾಸಣೆ ನಡೆಸಲಾಗಿದೆ. ಒಟ್ಟು 145645 ಜನರಿಗೆ ಕೊರೊನಾವೈರಸ್ ಸೋಂಕಿತ ತಪಾಸಣೆ ನಡೆಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿನ ಸ್ಫೋಟ

ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿನ ಸ್ಫೋಟ

ಕರ್ನಾಟಕದಲ್ಲಿ ಪತ್ತೆಯಾದ ಒಟ್ಟು ಹೊಸ ಪ್ರಕರಣಗಳ ಪೈಕಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಬೆಂಗಳೂರಿನಲ್ಲೇ ದೃಢಪಟ್ಟಿವೆ. ಒಂದು ದಿನದಲ್ಲಿ ಸಿಲಿಕಾನ್ ಸಿಟಿಯಲ್ಲೇ 12793 ಮಂದಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮಹಾಮಾರಿಗೆ 60 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 5123ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯೊಂದರಲ್ಲೇ 97897 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ

ರಾಜ್ಯದಲ್ಲಿ ಒಟ್ಟು 19067 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 104, ಬಳ್ಳಾರಿ 238, ಬೆಳಗಾವಿ 129, ಬೆಂಗಳೂರು ಗ್ರಾಮಾಂತರ 245, ಬೆಂಗಳೂರು 12793, ಬೀದರ್ 469, ಚಾಮರಾಜನಗರ 102, ಚಿಕ್ಕಬಳ್ಳಾಪುರ 190, ಚಿಕ್ಕಮಗಳೂರು 81, ಚಿತ್ರದುರ್ಗ 102, ದಕ್ಷಿಣ ಕನ್ನಡ 272, ದಾವಣಗೆರೆ 133, ಧಾರವಾಡ 265, ಗದಗ 48, ಹಾಸನ 348, ಹಾವೇರಿ 48, ಕಲಬುರಗಿ 671, ಕೊಡಗು 44, ಕೋಲಾರ 175, ಕೊಪ್ಪಳ 65, ಮಂಡ್ಯ 338, ಮೈಸೂರು 777, ರಾಯಚೂರು 133, ರಾಮನಗರ 122, ಶಿವಮೊಗ್ಗ 156, ತುಮಕೂರು 494, ಉಡುಪಿ 152, ಉತ್ತರ ಕನ್ನಡ 104, ವಿಜಯಪುರ 200, ಯಾದಗಿರಿ 74 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    #Covid19update : ಒಂದೇ ದಿನ ದೇಶದಲ್ಲಿ 2,73,810 ಜನರಿಗೆ ಕೊರೊನಾ ಸೋಂಕು! | Oneindia Kannada
    ರಾಜ್ಯದಲ್ಲಿ ಒಟ್ಟು 61.98 ಲಕ್ಷ ಜನರಿಗೆ ಕೊರೊನಾ ಲಸಿಕೆ

    ರಾಜ್ಯದಲ್ಲಿ ಒಟ್ಟು 61.98 ಲಕ್ಷ ಜನರಿಗೆ ಕೊರೊನಾ ಲಸಿಕೆ

    ಕರ್ನಾಟಕದಲ್ಲಿ ಈವರೆಗೂ 6987874 ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ರಾಜ್ಯದಲ್ಲಿ 577553 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 364047 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 258670 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 110109 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 2316445 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 83970 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 3079906 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 197174 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+