ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 2,000ಕ್ಕಿಂತ ಕಡಿಮೆ ಜನರಿಗೆ ಕೊವಿಡ್-19 ಕೇಸ್!

|
Google Oneindia Kannada News

ಬೆಂಗಳೂರು, ನವೆಂಬರ್.09: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದೆ. ಕಳೆದ ಒಂದು ದಿನದಲ್ಲಿ 1963 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲೇ 19 ಜನರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11410ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಕೊರೊನಾವೈರಸ್ ಪತ್ತೆಗೆ 'ಫೆಲುಡಾ' ಪರೀಕ್ಷೆ: 500 ರೂ. ಮಾತ್ರ!ಕೊರೊನಾವೈರಸ್ ಪತ್ತೆಗೆ 'ಫೆಲುಡಾ' ಪರೀಕ್ಷೆ: 500 ರೂ. ಮಾತ್ರ!

ಕೊರೊನಾವೈರಸ್ ಒಟ್ಟು 848850 ಸೋಂಕಿತ ಪ್ರಕರಣಗಳ ಪೈಕಿ 804485 ಸೋಂಕಿತರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲೇ 2686 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 32936 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

1963 New Coronavirus Cases Reported in Karnataka Today, State Tally Rise to 848850

ಎಷ್ಟು ಮಂದಿಗೆ ಕೊರೊನಾವೈರಸ್ ಪರೀಕ್ಷೆ?:

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 15457 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 69508 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 84965 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 88,23,191 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲೆವಾರು ಕೊರೊನಾವೈರಸ್ ಕೇಸ್?:

ರಾಜ್ಯದಲ್ಲಿ ಒಟ್ಟು 1963 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 22, ಬಳ್ಳಾರಿ 37, ಬೆಳಗಾವಿ 34, ಬೆಂಗಳೂರು ಗ್ರಾಮಾಂತರ 93, ಬೆಂಗಳೂರು 978, ಬೀದರ್ 3, ಚಾಮರಾಜನಗರ 12, ಚಿಕ್ಕಬಳ್ಳಾಪುರ 56, ಚಿಕ್ಕಮಗಳೂರು 6, ಚಿತ್ರದುರ್ಗ 69, ದಕ್ಷಿಣ ಕನ್ನಡ 18, ದಾವಣಗೆರೆ 19, ಧಾರವಾಡ 33, ಗದಗ 4, ಹಾಸನ 48, ಹಾವೇರಿ 13, ಕಲಬುರಗಿ 34, ಕೊಡಗು 14, ಕೋಲಾರ 52, ಕೊಪ್ಪಳ 16, ಮಂಡ್ಯ 73, ಮೈಸೂರು 95, ರಾಯಚೂರು 20, ರಾಮನಗರ 3, ಶಿವಮೊಗ್ಗ 28, ತುಮಕೂರು 65, ಉಡುಪಿ 29, ಉತ್ತರ ಕನ್ನಡ 47, ವಿಜಯಪುರ 38, ಯಾದಗಿರಿ 3, ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

BiharElectionResult : ತಮ್ಮನ ಪರವಾಗಿ ಟ್ವೀಟ್ ಮಾಡಿದ ತೇಜ್ | Oneindia Kannada

English summary
1963 New Coronavirus Cases Reported in Karnataka Today, State Tally Rise to 848850.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X