ಕರ್ನಾಟಕ: 24 ಗಂಟೆಗಳಲ್ಲಿ 2,000ಕ್ಕಿಂತ ಕಡಿಮೆ ಕೊರೊನಾವೈರಸ್ ಪ್ರಕರಣ

ಬೆಂಗಳೂರು, ಜುಲೈ 11: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 2,000ಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.24ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.83ರಷ್ಟಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1978 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 56 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 35,835 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ ಇದೇ ಅವಧಿಯಲ್ಲಿ 2,326 ಸೋಂಕಿತರು ಗುಣಮುಖರಾಗಿದ್ದಾರೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,71,298ಕ್ಕೆ ಏರಿಕೆಯಾಗಿದೆ. ಈವರೆಗೂ 27,98,703 ಸೋಂಕಿತರು ಗುಣಮುಖರಾಗಿದ್ದು. 36,737 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

1978 New Coronavirus Cases Reported in Karnataka Today, State Tally Rise to 2871298

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 28,135 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,30,763 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,58,898 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 65,82,566 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 2,93,52,052 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,59,34,618 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?
ರಾಜ್ಯದಲ್ಲಿ ಒಟ್ಟು 1978 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 112, ಬೆಂಗಳೂರು ಗ್ರಾಮಾಂತರ 64, ಬೆಂಗಳೂರು 433, ಬೀದರ್ 3, ಚಾಮರಾಜನಗರ 40, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 45, ಚಿತ್ರದುರ್ಗ 31, ದಕ್ಷಿಣ ಕನ್ನಡ 195, ದಾವಣಗೆರೆ 22, ಧಾರವಾಡ 30, ಗದಗ 4, ಹಾಸನ 132, ಹಾವೇರಿ 3, ಕಲಬುರಗಿ 16, ಕೊಡಗು 85, ಕೋಲಾರ 38, ಕೊಪ್ಪಳ 6, ಮಂಡ್ಯ 56, ಮೈಸೂರು 261, ರಾಯಚೂರು 3, ರಾಮನಗರ 11, ಶಿವಮೊಗ್ಗ 124, ತುಮಕೂರು 100, ಉಡುಪಿ 92, ಉತ್ತರ ಕನ್ನಡ 45, ವಿಜಯಪುರ 4, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      ಹರ್ಲೀನ್ ಹಿಡಿದ ಕ್ಯಾಚ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+