1993 ಬ್ಯಾಚ್ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ವಿಧಿವಶ

ಬೆಂಗಳೂರು, ಮಾರ್ಚ್ 13: 1993ನೇ ಬ್ಯಾಚ್ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ವಿಧಿವಶರಾಗಿದ್ದಾರೆ. ಆಂಧ್ರಪ್ರದೇಶ ಮೂಲದ ಚರಣ್ ರೆಡ್ಡಿ ಕರ್ನಾಟಕದಲ್ಲಿ ಎಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಬೆಂಗಳೂರಿನ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಚರಣ್ ರೆಡ್ಡಿ (55) ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಮೂಲದ ಚರಣ್ ರೆಡ್ಡಿ 1993ನೇ ಬ್ಯಾಚ್ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ. ಮಂಡ್ಯ ಮತ್ತು ಚಾಮರಾಜನಗರದಲ್ಲಿ ಎಸ್‌ಪಿಯಾಗಿ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ. 5 ವರ್ಷಗಳ ಕಾಲ ಸಿಬಿಐನಲ್ಲಿ ಕೆಲಸ ಮಾಡಿದ್ದರು.

1993 Batch IPS officer Charan Reddy No More

ಉತ್ತರ ವಲಯ ಐಜಿಪಿಯಾಗಿ 2016ರಲ್ಲಿ ಅವರನ್ನು ನೇಮಕ ಮಾಡಲಾಗಿತ್ತು. ಬೆಂಗಳೂರಿನ ಪಶ್ಚಿಮ ವಲಯದ ಹೆಚ್ಚುವರಿ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಗೆ ಸರ್ಕಾರ ರಚನೆ ಮಾಡಿದ್ದ ಎಸ್‌ಐಟಿಯ ಮುಖ್ಯಸ್ಥರಾಗಿದ್ದರು.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯನ್ನು ಚರಣ್ ರೆಡ್ಡಿ ವಿಚಾರಣೆ ಮಾಡಿದ್ದರು. ವಿಜಯಪುರದ ಚಡಚಣದಲ್ಲಿ ನಡೆದ ನಕಲಿ ಎನ್‌ ಕೌಂಟರ್ ಪ್ರಕರಣದಲ್ಲಿ ಸಾಹುಕಾರ ಮತ್ತು ಆತನ ಬೆಂಬಲಿಗರನ್ನು ಚರಣ್ ರೆಡ್ಡಿ ಬಂಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+