ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1993 ಬ್ಯಾಚ್ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ವಿಧಿವಶ

|
Google Oneindia Kannada News

ಬೆಂಗಳೂರು, ಮಾರ್ಚ್ 13: 1993ನೇ ಬ್ಯಾಚ್ ಐಪಿಎಸ್ ಅಧಿಕಾರಿ ಚರಣ್ ರೆಡ್ಡಿ ವಿಧಿವಶರಾಗಿದ್ದಾರೆ. ಆಂಧ್ರಪ್ರದೇಶ ಮೂಲದ ಚರಣ್ ರೆಡ್ಡಿ ಕರ್ನಾಟಕದಲ್ಲಿ ಎಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಬೆಂಗಳೂರಿನ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಚರಣ್ ರೆಡ್ಡಿ (55) ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಾಸ್ಕ್ ಗೆ ಇರುವ ಕ್ರೇಜ್ ಹೆಲ್ಮೆಟ್ ಗೆ ಯಾಕಿಲ್ಲ? ಐಪಿಎಸ್ ಅಧಿಕಾರಿ ಪ್ರಶ್ನೆ!ಮಾಸ್ಕ್ ಗೆ ಇರುವ ಕ್ರೇಜ್ ಹೆಲ್ಮೆಟ್ ಗೆ ಯಾಕಿಲ್ಲ? ಐಪಿಎಸ್ ಅಧಿಕಾರಿ ಪ್ರಶ್ನೆ!

ಆಂಧ್ರಪ್ರದೇಶದ ಚಿತ್ತೂರು ಮೂಲದ ಚರಣ್ ರೆಡ್ಡಿ 1993ನೇ ಬ್ಯಾಚ್ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ. ಮಂಡ್ಯ ಮತ್ತು ಚಾಮರಾಜನಗರದಲ್ಲಿ ಎಸ್‌ಪಿಯಾಗಿ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ. 5 ವರ್ಷಗಳ ಕಾಲ ಸಿಬಿಐನಲ್ಲಿ ಕೆಲಸ ಮಾಡಿದ್ದರು.

ಐಎಂಎ ಹಗರಣ; ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ! ಐಎಂಎ ಹಗರಣ; ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ!

1993 Batch IPS officer Charan Reddy No More

ಉತ್ತರ ವಲಯ ಐಜಿಪಿಯಾಗಿ 2016ರಲ್ಲಿ ಅವರನ್ನು ನೇಮಕ ಮಾಡಲಾಗಿತ್ತು. ಬೆಂಗಳೂರಿನ ಪಶ್ಚಿಮ ವಲಯದ ಹೆಚ್ಚುವರಿ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಗೆ ಸರ್ಕಾರ ರಚನೆ ಮಾಡಿದ್ದ ಎಸ್‌ಐಟಿಯ ಮುಖ್ಯಸ್ಥರಾಗಿದ್ದರು.

ಕರ್ನಾಟಕ: 2020ರಲ್ಲಿ ನಿವೃತ್ತರಾಗಲಿರುವ 12 ಐಪಿಎಸ್ ಅಧಿಕಾರಿಗಳು ಕರ್ನಾಟಕ: 2020ರಲ್ಲಿ ನಿವೃತ್ತರಾಗಲಿರುವ 12 ಐಪಿಎಸ್ ಅಧಿಕಾರಿಗಳು

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯನ್ನು ಚರಣ್ ರೆಡ್ಡಿ ವಿಚಾರಣೆ ಮಾಡಿದ್ದರು. ವಿಜಯಪುರದ ಚಡಚಣದಲ್ಲಿ ನಡೆದ ನಕಲಿ ಎನ್‌ ಕೌಂಟರ್ ಪ್ರಕರಣದಲ್ಲಿ ಸಾಹುಕಾರ ಮತ್ತು ಆತನ ಬೆಂಬಲಿಗರನ್ನು ಚರಣ್ ರೆಡ್ಡಿ ಬಂಧಿಸಿದ್ದರು.

English summary
KSR Charan Reddy 1993 batch IPS officer died due to cancer. Charan Reddy comes from Chittoor Andhra Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X