Get Updates
Get notified of breaking news, exclusive insights, and must-see stories!

ಕರ್ನಾಟಕ: 2021-22 ನೇ ಸಾಲಿನ ಪ್ರಥಮ, ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

Karnataka 2nd PUC Time Table 2022: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ, ಪೂರ್ವ ಸಿದ್ಧತಾ ಮತ್ತು ಪ್ರಾಯೋಗಿಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.

2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿದ್ದು ಅದರ ವಿವರಗಳನ್ನು ಸಹ ಪರೀಕ್ಷೆ ವೇಳಾಪಟ್ಟಿಯೊಂದಿಗೆ ಇಲಾಖೆಯು ಪ್ರಕಟಿಸಿದೆ.

-ಭಾಷಾ ವಿಷಯಗಳಲ್ಲಿ 2020-2021ನೇ ಸಾಲಿನಲ್ಲಿ ಕಡಿತಗೊಳಿಸಲಾಗಿದ್ದ ಶೇ.30ರಷ್ಟು ಪಠ್ಯಕ್ರಮವನ್ನು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇ.30ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಲಾಗಿದ್ದು, ಶೇ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತದೆ.

Karnataka 1st And 2nd PUC Exam 2022 Timetable Released On January 18

-2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

-2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ವೇಳಾಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಚೆಕ್‌ ಮಾಡಬಹುದು. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ದಿನಾಂಕ 17-02-2022 ರಿಂದ 25-03-2022 ರವರೆಗೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ದಿನಾಂಕ 14-03-2022 ರಿಂದ 25-03-2022 ರವರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ದಿನಾಂಕ 16-04-2022 ರಿಂದ 04-05-2022 ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

2021-22ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ದಿನಾಂಕ 28-03-2022 ರಿಂದ 13-04-2022 ರ ವರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+