ಪ್ರಥಮ ಪಿಯು ದಾಖಲಾತಿ; ಆ.13ರಿಂದ ಅರ್ಜಿ ವಿತರಣೆ

ಬೆಂಗಳೂರು, ಆಗಸ್ಟ್ 12 : ಕೋವಿಡ್ ಸೋಂಕಿನ ಭೀತಿಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಸ್ಥಗಿತಗೊಂಡಿದ್ದ ಶೈಕ್ಷಣಿಕ ಚಟುವಟಿಕೆ ಆರಂಭವಾಗಲಿದೆ. ಗುರುವಾರದಿಂದ ಪಿಯುಸಿ ದಾಖಲಾತಿ ಆರಂಭಿಸಲು ಸೂಚನೆ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಹಿನ್ನಲೆಯಲ್ಲಿ 2020-21ನೇ ಸಾಲಿನ ಪ್ರಥಮ ಪಿಯುಸಿ ದಾಖಲಾತಿಯನ್ನು ಗುರುವಾರದಿಂದ ಆರಂಭಿಸಬಹುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

1st PUC Admission Get Applications From August 13

ಗುರುವಾರದಿಂದ ನಾಲ್ಕು ದಿನಗಳ ಕಾಲ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿಗಳನ್ನು ನೀಡಲು ಸೂಚನೆ ನೀಡಲಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿ ಶುಲ್ಕಗಳನ್ನು ಹೆಚ್ಚಿಸದಂತೆ ಖಾಸಗಿ ಕಾಲೇಜುಗಳಿಗೆ ಸೂಚನೆ ಕೊಡಲಾಗಿದೆ.

ಕಳೆದ ವರ್ಷಕ್ಕಿಂತ ಕಡಿಮೆ ಶುಲ್ಕವನ್ನು ಪಡೆಯಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಪ್ರಥಮ ಪಿಯುಸಿ ದಾಖಲಾತಿ ಆರಂಭವಾದರೂ ಕಾಲೇಜುಗಳು ಎಂದು ಆರಂಭವಾಗಲಿವೆ? ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಪ್ರಕಟಿಸಿಲ್ಲ.

ಕೋವಿಡ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ಹಲವಾರು ರಾಜ್ಯಗಳು ಬಯಸಿವೆ. ಆದರೆ, ಆಗ ಕೋವಿಡ್ ಪರಿಸ್ಥಿತಿ ಹೇಗಿರಲಿದೆ? ಎಂಬುದನ್ನು ನೋಡಿಕೊಂಡು ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+