ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಥಮ ಪಿಯು ದಾಖಲಾತಿ; ಆ.13ರಿಂದ ಅರ್ಜಿ ವಿತರಣೆ

|
Google Oneindia Kannada News

ಬೆಂಗಳೂರು, ಆಗಸ್ಟ್ 12 : ಕೋವಿಡ್ ಸೋಂಕಿನ ಭೀತಿಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಸ್ಥಗಿತಗೊಂಡಿದ್ದ ಶೈಕ್ಷಣಿಕ ಚಟುವಟಿಕೆ ಆರಂಭವಾಗಲಿದೆ. ಗುರುವಾರದಿಂದ ಪಿಯುಸಿ ದಾಖಲಾತಿ ಆರಂಭಿಸಲು ಸೂಚನೆ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಹಿನ್ನಲೆಯಲ್ಲಿ 2020-21ನೇ ಸಾಲಿನ ಪ್ರಥಮ ಪಿಯುಸಿ ದಾಖಲಾತಿಯನ್ನು ಗುರುವಾರದಿಂದ ಆರಂಭಿಸಬಹುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯೂಟ್ಯೂಬ್ ಮೂಲಕ ಪಾಠ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯೂಟ್ಯೂಬ್ ಮೂಲಕ ಪಾಠ

1st PUC Admission Get Applications From August 13

ಗುರುವಾರದಿಂದ ನಾಲ್ಕು ದಿನಗಳ ಕಾಲ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿಗಳನ್ನು ನೀಡಲು ಸೂಚನೆ ನೀಡಲಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿ ಶುಲ್ಕಗಳನ್ನು ಹೆಚ್ಚಿಸದಂತೆ ಖಾಸಗಿ ಕಾಲೇಜುಗಳಿಗೆ ಸೂಚನೆ ಕೊಡಲಾಗಿದೆ.

ಶಾಲೆ, ಕಾಲೇಜುಗಳನ್ನು ತೆರೆಯುವುದಿಲ್ಲ: ಆದರೆ ಶಿಕ್ಷಣ ನಿಲ್ಲುವುದಿಲ್ಲ: ಸರ್ಕಾರ ಮಹತ್ವದ ನಿರ್ಧಾರಶಾಲೆ, ಕಾಲೇಜುಗಳನ್ನು ತೆರೆಯುವುದಿಲ್ಲ: ಆದರೆ ಶಿಕ್ಷಣ ನಿಲ್ಲುವುದಿಲ್ಲ: ಸರ್ಕಾರ ಮಹತ್ವದ ನಿರ್ಧಾರ

ಕಳೆದ ವರ್ಷಕ್ಕಿಂತ ಕಡಿಮೆ ಶುಲ್ಕವನ್ನು ಪಡೆಯಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಪ್ರಥಮ ಪಿಯುಸಿ ದಾಖಲಾತಿ ಆರಂಭವಾದರೂ ಕಾಲೇಜುಗಳು ಎಂದು ಆರಂಭವಾಗಲಿವೆ? ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಪ್ರಕಟಿಸಿಲ್ಲ.

ಈ ಬಾರಿ ಪ್ರತಿ ಶಾಲೆ ವಿದ್ಯಾರ್ಥಿಗೆ ಬಣ್ಣ ಬಣ್ಣದ ಸಮವಸ್ತ್ರ ಈ ಬಾರಿ ಪ್ರತಿ ಶಾಲೆ ವಿದ್ಯಾರ್ಥಿಗೆ ಬಣ್ಣ ಬಣ್ಣದ ಸಮವಸ್ತ್ರ

ಕೋವಿಡ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ಹಲವಾರು ರಾಜ್ಯಗಳು ಬಯಸಿವೆ. ಆದರೆ, ಆಗ ಕೋವಿಡ್ ಪರಿಸ್ಥಿತಿ ಹೇಗಿರಲಿದೆ? ಎಂಬುದನ್ನು ನೋಡಿಕೊಂಡು ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.

English summary
Education department of Karnataka issued notification and directed the colleges to issue 1st PUC application from August 13th to 4 days for 2020-21 academic year admission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X