ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಸಗಿ ಶಾಲೆ ಆರಂಭಕ್ಕೆ 2,429 ಅರ್ಜಿ: ಆತಂಕದಲ್ಲಿ ಸರ್ಕಾರಿ ಶಾಲೆಗಳು

By Nayana
|
Google Oneindia Kannada News

ಬೆಂಗಳೂರು, ಮೇ 30: ಮಕ್ಕಳಾಗಲಿ ಅಥವಾ ಪೋಷಕರಾಗಲಿ ಖಾಸಗಿ ಶಾಲೆಗಳತ್ತ ಒಲವು ತೋರಿಸುತ್ತಿರುವ ಕಾರಣ, ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿ ಬಂದಿದೆ. ಇದರ ಬೆನ್ನಲ್ಲೇ ಹೊಸ ಶಾಲೆಗಳನ್ನು ಪ್ರಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಭಾರಿ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗಿದೆ.

ಹೀಗಾಗಿ ಸರ್ಕಾರಿ ಶಾಲೆಗಳಿಗೆ ಇನ್ನಷ್ಟು ಆತಂಕ ಆರಂಭವಾಗಿದೆ. ಹಿಂದಿನ ಸರ್ಕಾರ ಹೊಸ ಶಾಲೆ ತೆರೆಯಲು ಅನುಮತಿ ನೀಡುವುದಿಲ್ಲ ಎನ್ನುತ್ತಲೇ 2018-19ನೇ ಸಾಲಿನಲ್ಲಿ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿತ್ತು.

ಆರ್‌ಟಿಇ: ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿದರೆ ದೂರು ನೀಡಿ!ಆರ್‌ಟಿಇ: ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿದರೆ ದೂರು ನೀಡಿ!

ಇದೀಗ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ದಿನಾಂಕ ಮುಕ್ತಾಯವಾಗಿದ್ದು, 34 ಶೈಕ್ಷಣಿಕ ಜಿಲ್ಲೆಗಳಿಂದ 2,429 ಶಾಲೆಗಳ ಪ್ರಾರಂಭಕ್ಕೆ ಎರಡೂವರೆ ಸಾವಿರ ಅರ್ಜಿಗಳು ಸಲ್ಲಿಕೆಯಾಗಿದೆ. ಹೊಸ ಪ್ರಾಥಮಿಕ ಶಾಲೆ-942, 6ರಿಂದ 8ನೇ ತರಗತಿ 1,016, ಪ್ರೌಢಶಾಲೆ(9-10ನೇ ತರಗತಿ) 416, ಪೂರ್ವ ಪ್ರಾಥಮಿಕದಿಂದ ಪ್ರೌಢಶಾಲೆ 13, ಪೂರ್ವ ಪ್ರಾಥಮಿಕದಿಂದ ಪ್ರೌಢಶಾಲೆಗಳವರೆಗೆ 42 ಅರ್ಜಿಗಳು ಸಲ್ಲಿಕೆಯಾಗಿದೆ.

2.5k new private schools seeking permission

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅರ್ಜಿ ಸಲ್ಲಿಕೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ ಸಾಲಿನಲ್ಲಿ 2292 ಅರ್ಜಿಗಳು ಬಂದಿದ್ದವು. ಇದೆಲ್ಲವುಗಳಲ್ಲಿ ಬೆಂಗಳೂರಿನಿಂದಲೇ ಹೆಚ್ಚು ಬೇಡಿಕೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

English summary
Department of education has received 2,429 applications seeking permission for new private schools in the state. It is believed that this much of new schools will threat for the government schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X