Government Employees: ಸರ್ಕಾರಿ ನೌಕರರಿಗೆ 2 ದಿನಗಳ ವಿಶೇಷ ಸಾಂದರ್ಭಿಕ ರಜಾ ಸೌಲಭ್ಯ

ಬೆಂಗಳೂರು, ಏಪ್ರಿಲ್‌ 10: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಆಗಾಗ ಗುಡ್‌ ನ್ಯೂಸ್‌ ನೀಡುತ್ತಲೇ ಇರುತ್ತದೆ. ಹಾಗೆಯೇ ಇದಿಗ ಸರ್ಕಾರಿ ನೌಕರರಿಗೆ ಸಿಗುವ ರಜಾ ಸೌಲಭ್ಯಗಳು ಹಾಗೂ ನಿಯಮಗಳ ಕುರಿತಂತೆ ಮಹತ್ವದ ಮಾಹಿತಿ ನೀಡಿದೆ. ಪ್ರತಿವರ್ಷದಂತೆ ಈ ವರ್ಷವೂ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಜಿಲ್ಲಾಮಟ್ಟದಲ್ಲಿ ಇದೇ ಏಪ್ರಿಲ್ 15 ಮತ್ತು 16ರಂದು ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಏಪ್ರಿಲ್ 15 ಮತ್ತು 16ರಂದು ನಡೆಯುವ ಚಿತ್ರದುರ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಆಯಾ ಇಲಾಖಾ ಮುಖ್ಯಸ್ಥರು ಶೇ.50ರಷ್ಟು ಸಿಬ್ಬಂದಿಗಳಿಗೆ ಮೀರದಂತೆ ಭಾಗವಹಿಸು ಅನುಮತಿ ನೀಡತಕ್ಕದ್ದು. ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅಧಿಕಾರಿ, ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣ ಪತ್ರ ಹಾಜರು ಪಡಿಸುವ ಷರತ್ತಿಗೊಳಪಡಿಸಿ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವುದು ಮತ್ತು ಕ್ರೀಡಾಕೂಟ ನಡೆಯುವ ದಿನಗಳ ಪ್ರಯಾಣಭತ್ಯೆಯನ್ನು ಮಾತೃ ಇಲಾಖೆಯಿಂದಲೇ ಭರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಸಮಿತಿ ಅಧ್ಯಕ್ಷರಾದ ಟಿ.ವೆಂಕಟೇಶ್ ತಿಳಿಸಿದ್ದಾರೆ.

2 Days Special Casual Leave Facility For Government Employees

ಭಗವಾನ್ ಬುದ್ದ ಜಯಂತಿ ಆಚರಣೆ ಕಡ್ಡಾಯ

ರಾಜ್ಯಾಧ್ಯಂತ ಭಗವಾನ್ ಬುದ್ಧ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಲಾಗಿದೆ.

ಸಹಕಾರ ಸಂಘಗಳ ಅಪರ ನಿಬಂಧಕರು (ನಿ), ಮೈಸೂರು ಇವರು ದಿನಾಂಕ:19.08.2023ರ ಪತ್ರದಲ್ಲಿ, ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು, ಏಷ್ಯಾ ಖಂಡದ ಹಲವಾರು ರಾಷ್ಟ್ರಗಳು ಬುದ್ದ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ವೈಭವದಿಂದ ಆಚರಿಸುತ್ತಿದ್ದು, ವಿಶ್ವದ ಪ್ರಥಮ ಹಾಗೂ ಶ್ರೇಷ್ಠ ದಾರ್ಶನಿಕರಾದ ಬುದ್ಧರ ಜಯಂತಿಯನ್ನು ಅವರು ಜನಿಸಿದ ಭಾರತದಲ್ಲಿ ಸರ್ಕಾರದ ವತಿಯಿಂದ ಆಚರಿಸುವುದು ಸೂಕ್ತ ಎಂದು ತಿಳಿಸುತ್ತಾ, ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಸರ್ಕಾರದ ವತಿಯಿಂದ ಪ್ರತಿವರ್ಷ ಆಯೋಜಿಸಿ ಆಚರಿಸಲು ಸರ್ಕಾರದ ಆದೇಶ ಹೊರಡಿಸುವಂತೆ ಕೋರಿರುತ್ತಾರೆ .

ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಈಗಾಗಲೇ ವಾರ್ಷಿಕವಾಗಿ ವಿವಿಧ ಮಹಾಪುರುಷರ 32 ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಭಗವಾನ್ ಬುದ್ಧರ ಜಯಂತಿಯನ್ನು ಇಲಾಖಾ ವತಿಯಿಂದ ಆಚರಿಸುವ ಬಗ್ಗೆ ಸರ್ಕಾರದ ಮಾರ್ಗದರ್ಶನ ನೀಡುವಂತೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು ಕೋರಿರುತ್ತಾರೆ. ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಭಗವಾನ್ ಬುದ್ಧರ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ಸರ್ಕಾರವು ಆದೇಶಿಸಿದ್ದಾರೆ. ಸದರಿ ಜಯಂತಿಯ ಆಚರಣೆಗೆ ತಗಲುವ ವೆಚ್ಚವನ್ನು ಮಹಾಪುರುಷರ ಜಯಂತಿಗಳ ಆಚರಣೆಗೆ 2025-263 ಸಾಲಿನ ಅನುದಾನದಿಂದ ಭರಿಸತಕ್ಕದ್ದು ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+