ಇಬ್ಬರು ಐಎಎಸ್, 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಆಗಸ್ಟ್ 30 : ಕರ್ನಾಟಕ ಸರ್ಕಾರ ಪುನಃ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇಬ್ಬರು ಐಎಎಸ್ ಮತ್ತು 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಶುಕ್ರವಾರ ಸಂಜೆ ಕರ್ನಾಟಕ ಸರ್ಕಾರ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಇ. ವಿ. ರಮಣ ರೆಡ್ಡಿಗೆ ಹೆಚ್ಚುವರಿಯಾಗಿ ಐಟಿಬಿಟಿ ಇಲಾಖೆ ಮುಖ್ಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್‌ರನ್ನು ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಜಿನೇಂದ್ರ ಖಣಗಾವಿಯನ್ನು ಎಸಿಬಿ ಬೆಂಗಳೂರು ಎಸ್‌ಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಐಎಎಸ್ ಅಧಿಕಾರಿ ಎಚ್.ಬಸವರಾಜೇಂದ್ರ ಕೆಐಎಡಿಬಿ ಸಿಇಓ ಆಗಿ ನೇಮಕ ಮಾಡಲಾಗಿದೆ. ವಿಪುಲ್ ಕುಮಾರ್‌ರನ್ನು ದಕ್ಷಿಣ ವಲಯ ಐಜಿಪಿಯಾಗಿ ನೇಮಿಸಲಾಗಿದೆ. ಯಡಾ ಮಾರ್ಟಿನ್ ಬೆಂಗಳಗೂರಿನ ಸಿಐಡಿ ಎಸ್‌ಪಿಯಾಗಿ ನೇಮಿಸಲಾಗಿದೆ.
ಕರ್ನಾಟಕದಲ್ಲಿ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳು ಕಳೆದಿದೆ. 40ಕ್ಕೂ ಹೆಚ್ಚು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.












Click it and Unblock the Notifications