ಬ್ರೇಕಿಂಗ್ ನ್ಯೂಸ್ : ಇಬ್ಬರು ಶಾಸಕರಿಂದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್

Recommended Video

      ಅಪಾಯದಲ್ಲಿರುವ ಎಚ್ ಡಿ ಕುಮಾರಸ್ವಾಮಿ ಮೈತ್ರಿ ಸರ್ಕಾರ | Oneindia Kannada

      ಬೆಂಗಳೂರು, ಜನವರಿ 15 : ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಇಬ್ಬರು ಶಾಸಕರು ವಾಪಸ್ ಪಡೆದರು. ಬಿಜೆಪಿ ಬೆಂಬಿಸುವುದಾಗಿ ಇಬ್ಬರು ಶಾಸಕರು ಮಾಧ್ಯಮಗಳಿಗೆ ಹೇಳಿಕೆ ನೀಡಿದರು.

      ಮಂಗಳವಾರ ಮಧ್ಯಾಹ್ನ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಮತ್ತು ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದಿದ್ದಾರೆ.

      ಇಬ್ಬರು ಶಾಸಕರು ಈ ಕುರಿತು ಪತ್ರವನ್ನು ಸಿದ್ಧಪಡಿಸಿದ್ದು, ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಸಂಪುಟ ಪುನಾರಚನೆ ಸಮಯದಲ್ಲಿ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈ ಬಿಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಅವರು, ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದಾರೆ.

      'ಇಂದು ಮಕರ ಸಂಕ್ರಾಂತಿ, ಈ ದಿನ ನಾವು ಸರ್ಕಾರವನ್ನು ಬದಲಾವಣೆ ಮಾಡಲು ಮುಂದಾಗಿದ್ದೇವೆ. ಸರ್ಕಾರ ಪ್ರಮಾಣಿಕವಾಗಿರಬೇಕು. ಅದಕ್ಕಾಗಿ ನೀಡಿದ ಬೆಂಬಲವನ್ನು ವಾಪಸ್ ಪಡೆಯುತ್ತಿದ್ದೇನೆ' ಎಂದು ಆರ್.ಶಂಕರ್ ಹೇಳಿದರು.

      ಮುಂಬೈನ ಹೋಟೆಲ್‌ನಲ್ಲಿರುವ ಇಬ್ಬರು ಶಾಸಕರು ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ. ಆದ್ದರಿಂದ, ಸಂಜೆಯ ಹೊತ್ತಿಗೆ ಇಬ್ಬರು ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ.

      ಸರ್ಕಾರ ಭದ್ರವಾಗಿದೆ

      ಸರ್ಕಾರ ಭದ್ರವಾಗಿದೆ

      'ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದಿದ್ದಾರೆ. ಬಿಜೆಪಿ ನಮ್ಮ ಶಾಸಕರಿಗೆ ಹಣ ಮತ್ತು ಅಧಿಕಾರದ ಆಮಿಷವೊಡ್ಡಿದೆ. ಈ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದೆ. ಆದರೆ, ಸರ್ಕಾರ ಸುಭದ್ರವಾಗಿದೆ' ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

      ಮಾಧ್ಯಮಗಳ ಸೃಷ್ಟಿ

      ಮಾಧ್ಯಮಗಳ ಸೃಷ್ಟಿ

      'ಸರ್ಕಾರ ಅಲ್ಪ ಮತಕ್ಕೆ ಕುಸಿಯಲಿದೆ ಎಂಬುದು ಮಾಧ್ಯಮಗಳ ಸೃಷ್ಟಿ. ಕಾಂಗ್ರೆಸ್ ಶಾಸಕರು ಪಕ್ಷದ ಜೊತೆಗೆ ಇದ್ದಾರೆ' ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

      ಅಲ್ಪ ಮತಕ್ಕೆ ಕುಸಿಯುವುದಿಲ್ಲ

      ಅಲ್ಪ ಮತಕ್ಕೆ ಕುಸಿಯುವುದಿಲ್ಲ

      ಇಬ್ಬರು ಪಕ್ಷೇತರ ಶಾಸಕರ ರಾಜೀನಾಮೆಯಿಂದಾಗಿ ಕರ್ನಾಟಕ ಸರ್ಕಾರ ಅಲ್ಪ ಮತಕ್ಕೆ ಕುಸಿಯುವುದಿಲ್ಲ. ಏಕೆಂದರೆ ಸ್ಪೀಕರ್ ಹೊರತು ಪಡಿಸಿ ಸರ್ಕಾರಕ್ಕೆ 119 ಸದಸ್ಯ ಬಲವಿದೆ. ಮ್ಯಾಜಿಕ್ ನಂಬರ್ 113.

      ಸರ್ಕಾರದ ಸಂಖ್ಯಾಬಲ

      ಸರ್ಕಾರದ ಸಂಖ್ಯಾಬಲ

      ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಕಾಂಗ್ರೆಸ್‌ನ 79 (ಸ್ಪೀಕರ್ ಬಿಟ್ಟು), ಜೆಡಿಎಸ್‌ನ 37, ಬಿಎಸ್‌ಪಿಯ 1 ಸದಸ್ಯರ ಬೆಂಬಲವಿದೆ.

      ಸರ್ಕಾರ ವಿಫಲವಾಗಿದೆ

      ಉತ್ತಮ ಮತ್ತು ಸ್ಥಿರ ಸರ್ಕಾರ ನೀಡಲು ನಾನು ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದೆ. ಆದರೆ, ಅದು ವಿಫಲವಾಗಿದೆ. ಮೈತ್ರಿ ಸರ್ಕಾರದಲ್ಲಿ ಸಮನ್ವಯತೆ ಇಲ್ಲ. ಆದ್ದರಿಂದ, ಬೆಂಬಲ ವಾಪಸ್ ಪಡೆಯುತ್ತಿದ್ದೇನೆ ಎಂದು ಎಚ್.ನಾಗೇಶ್ ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+