ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಗ್ ಬ್ರೇಕಿಂಗ್: ಕರ್ನಾಟಕದಲ್ಲಿ ಒಟ್ಟು 10 ಮಂದಿಗೆ ಕೋವಿಡ್-19 ಪಾಸಿಟಿವ್

|
Google Oneindia Kannada News

ಬೆಂಗಳೂರು, ಮಾರ್ಚ್ 16: ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿರುವ ಮಾರಣಾಂತಿಕ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕರ್ನಾಟಕ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಕರ್ನಾಟಕದಲ್ಲಿ ರಾಜ್ಯದಲ್ಲಿ ಇಂದು ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಸ್ಪಷ್ಟವಾಗಿದೆ. ಆ ಮೂಲಕ ಕರ್ನಾಟಕದಲ್ಲಿ ಒಟ್ಟು ಕೊರೊನಾ ಸೋಂಕು ಪೀಡಿತರ ಸಂಖ್ಯೆ 10 ಕ್ಕೆ ಏರಿದೆ.

ಸಾವಿನ ಮನೆಯಿಂದ ಎದ್ದು ಬಂದ ಕೊರೊನಾ ಪೀಡಿತ ಭಾರತೀಯನ ರೋಚಕ ಕಥೆಸಾವಿನ ಮನೆಯಿಂದ ಎದ್ದು ಬಂದ ಕೊರೊನಾ ಪೀಡಿತ ಭಾರತೀಯನ ರೋಚಕ ಕಥೆ

ಆರೋಗ್ಯ ಸಚಿವ ಬಿ.ಶ್ರೀರಾಮುಲು ರವರು ನೀಡಿರುವ ಮಾಹಿತಿ ಪ್ರಕಾರ, ಯುಕೆ ಪ್ರವಾಸದಿಂದ ಭಾರತಕ್ಕೆ ವಾಪಸ್ ಆಗಿದ್ದ 20 ವರ್ಷ ವಯಸ್ಸಿನ ಯುವತಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹಾಗೇ, ಕೊರೊನಾ ವೈರಸ್ ಸೋಂಕಿನಿಂದ ಕಲಬುರಗಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದ 60 ವರ್ಷ ವಯಸ್ಸಿನ ವ್ಯಕ್ತಿಗೆ (ಪುರುಷ) ಕೋವಿಡ್-19 ಪಾಸಿಟಿವ್ ಇರುವುದು ಪತ್ತೆ ಆಗಿದೆ.

2 More Covid 19 Cases In Karnataka Taking Total Number Of Confirmed Cases To 10

ಇವರಿಬ್ಬರನ್ನೂ ಈಗಾಗಲೇ ಪ್ರತ್ಯೇಕರಿಸಲ್ಪಟ್ಟು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

English summary
2 More Covid 19 cases in Karnataka taking total number of confirmed cases to 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X