ಸರ್ಕಾರ ಉಳಿಸಲು ಎಚ್.ಡಿ.ಕುಮಾರಸ್ವಾಮಿ ಮುಂದೆ 2 ಆಯ್ಕೆ

Recommended Video

      ಎಚ್ ಡಿ ಕುಮಾರಸ್ವಾಮಿ ಬಳಿ ಸರಕಾರ ಉಳಿಸಿಕೊಳ್ಳಲು ಇರುವುದು 2 ಆಯ್ಕೆಗಳು | Oneindia Kannada

      ಬೆಂಗಳೂರು, ಜುಲೈ 07 : 9 ಕಾಂಗ್ರೆಸ್ ಮತ್ತು 3 ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿಯುವ ಭೀತಿ ಎದುರಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮುಂದೆ ಸರ್ಕಾರ ಉಳಿಸಿಕೊಳ್ಳಲು 2 ಆಯ್ಕೆಗಳಿವೆ.

      ಎಚ್.ಡಿ.ಕುಮಾರಸ್ವಾಮಿ ಅವರು ನ್ಯೂಯಾರ್ಕ್‌ನಿಂದ ಹೊರಟಿದ್ದು ಭಾನುವಾರ ಸಂಜೆ 8.30ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಕುಮಾರಸ್ವಾಮಿ ಆಗಮನದ ಬಳಿಕ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಮತ್ತಷ್ಟು ಬಿರುಸಾಗುವ ಸಾಧ್ಯತೆ ಇದೆ.

      ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಸುವ ನಿರೀಕ್ಷೆ ಇದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಳಿಕ ಕುಮಾರಸ್ವಾಮಿ ಅವರು ಮುಂದಿನ ತೀರ್ಮಾನವನ್ನು ಕೈಗೊಳ್ಳುವ ನಿರೀಕ್ಷೆ ಇದೆ.

      2 options for HD Kumaraswamy to save government

      ಕುಮಾರಸ್ವಾಮಿ ಅವರ ಮುಂದೆ ಸರ್ಕಾರವನ್ನು ಉಳಿಸಿಕೊಳ್ಳಲು 2 ಆಯ್ಕೆಗಳಿವೆ....

      ಆಯ್ಕೆ 1 : ರಾಜೀನಾಮೆ ನೀಡಿರುವ ಶಾಸಕರನ್ನು ಹೇಗಾದರೂ ಸಂಪರ್ಕ ಮಾಡಿ ಅವರ ಮನವೊಲಿಸುವ ಕಾರ್ಯ ಮಾಡುವುದು. ರಾಜ್ಯಪಾಲರು ವಿಶ್ವಾಸಮತ ಯಾಚನೆಗೆ ಸೂಚನೆ ನೀಡಿದರೆ ವಿಧಾನಸಭೆ ಅಧಿವೇಶನದ ಮೊದಲ ದಿನವೇ ವಿಶ್ವಾಸ ಮತದ ನಿರ್ಣಯ ಮಂಡನೆ ಮಾಡದೆ ನೇರವಾಗಿ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಬಹುದು.

      ಆಯ್ಕೆ 2 : ಶಾಸಕರ ರಾಜೀನಾಮೆ ಬಗ್ಗೆ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಬಹುದು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ವಿಧಾನಸಭೆ ವಿಸರ್ಜನೆ ಮಾಡಬಹುದು. ಸಚಿವ ಸಂಪುಟ ಸಭೆ ನಡೆಸಿ ವಿಧಾನಸಭೆ ವಿಸರ್ಜನೆ ತೀರ್ಮಾನ ಕೈಗೊಂಡು ಅದನ್ನು ರಾಜ್ಯಪಾಲರಿಗೆ ತಲುಪಿಸಬಹುದು.

      ವಿಧಾನಸಭೆ ವಿಸರ್ಜನೆ ತೀರ್ಮಾನವನ್ನು ರಾಜ್ಯಪಾಲರು ಒಪ್ಪಬೇಕು ಎಂದೇನಿಲ್ಲ. ಬೇರೊಂದು ಪಕ್ಷಕ್ಕೆ ಸರ್ಕಾರ ರಚಿಸುವಷ್ಟು ಸಂಖ್ಯಾಬಲವಿದ್ದರೆ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಬಹುದು. ಯಾವ ಪಕ್ಷಕ್ಕೂ ಸಂಖ್ಯಾಬಲವಿಲ್ಲದಿದ್ದರೆ ವಿಧಾನಸಭೆ ವಿಸರ್ಜನೆಗೆ ಒಪ್ಪಿಗೆ ನೀಡಬಹುದು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+