Get Updates
Get notified of breaking news, exclusive insights, and must-see stories!

ಸಾವು ಗೆದ್ದಸಾತ್ವಿಕ್; ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು: ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್‌ 04: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದದ ಎರಡು ವರ್ಷದ ಮಗುವನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಸತತ 20 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಸಾತ್ವಿಕ್‌ನನ್ನು ಹೊರತೆಗೆಯಲಾಗಿದ್ದು, ಪ್ರಥಮ ಚಿಕಿತ್ಸೆಗೆ ಸ್ಥಳದಲ್ಲಿ ಸಿದ್ಧಪಡಿಸಲಾಗಿತ್ತು.

ಮಗುವಿನ ತಾಯಿ ಹಾಗೂ ಸಾವಿರಾರು ಜನರ ಪ್ರಾರ್ಥನೆ ಫಲಿಸಿದ್ದು, ಸಾತ್ವಿಕ್‌ ಅನ್ನು ರಕ್ಷಣಾ ತಂಡಗಳು ಯಶಸ್ವಿಯಾಗಿ ರಕ್ಷಿಸಿವೆ. ಇನ್ನೂ ಸ್ಥಳದಲ್ಲಿಯೇ ಆಂಬುಲೆನ್ಸ್‌ ಹಾಗೂ ವೈದ್ಯರು ಬೀಡು ಬಿಟ್ಟಿದ್ದರಿಂದ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ ವ್ಯಕ್ತಪಡಿಸಿದ್ದಾರೆ.

2 Year-Old Rescued From 16 Feet Deep Borewell In Vijayapura Know What Siddaramaiah Says

ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.

ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ - ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು. ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ.

ಇನ್ನೂ ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದು, ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕೊಳವೆ ಬಾವಿಗೆ ಬಿದ್ದು ಜೀವನ್ಮರಣ ಹೋರಾಟ ನಡೆಸಿ ಮೃತ್ಯುಂಜಯನಾಗಿ ಹೊರಬಂದ ಒಂದೂವರೆ ವರ್ಷದ ಮಗು ಚಿ.ಸಾತ್ವಿಕ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ.

ಅತ್ಯಂತ ಕಠಿಣ ಮತ್ತು ಸವಾಲಿನದ್ದು ಆಗಿದ್ದ ಈ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ ಮಗುವಿನ ಜೀವ ಉಳಿದಿದ್ದು ನನಗೆ ಅತೀವ ಸಂತಸ ಉಂಟು ಮಾಡಿದೆ. ಮಗುವನ್ನು ರಕ್ಷಣೆ ಮಾಡಿದ ಎಲ್ಲಾ NDRF, SDRF, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿಗೆ ಅವರ ಪೋಷಕರು ಮಾತ್ರವಲ್ಲ, ಇಡೀ ನಾಡಿಗೆ ನಾಡೇ ಋಣಿಯಾಗಿದೆ. ಈ ಎಲ್ಲಾ ಸಿಬ್ಬಂದಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.'

ಸುರಕ್ಷಿತವಾಗಿ ಮಗು ಹೊರಕ್ಕೆ:ಲಕ್ಷ್ಮೀ ಹೆಬ್ಬಾಳಕರ್ ಸಂತಸ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ, ಮಗುವನ್ನು ರಕ್ಷಣಾ ಸಿಬ್ಬಂದಿಗಳು ಸುರಕ್ಷಿತವಾಗಿ ಹೊರತೆಗೆದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಸ ವ್ಯಕ್ತಪಡಿಸಿದ್ದಾರೆ.

ಕೋಟಿ ಕೋಟಿ ಜನರ ಪ್ರಾರ್ಥನೆಗೆ ಫಲ ಸಿಕ್ಕಿದೆ. ದೇವರ ದಯೆಯಿಂದ, ರಕ್ಷಣಾ ಸಿಬ್ಬಂದಿಯ ಶ್ರಮದಿಂದ ಮಗು ಸುರಕ್ಷಿತವಾಗಿ ಹೊರಗೆ ಬಂದಿದೆ. ನಮ್ಮೆಲ್ಲರ ಆತಂಕ ದೂರವಾಗಿದೆ. ರಕ್ಷಣಾ ಸಿಬ್ಬಂದಿಗೆ ನಾನು ಅಭಿನಂದನೆ ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ಮನೆ ಬಳಿ ಆಟವಾಡುತ್ತಿದ್ದ 2 ವರ್ಷದ ಮಗು ಸಾತ್ವಿಕ್ ಆಕಸ್ಮಿಕವಾಗಿ ಬುಧವಾರ ಸಂಜೆ ಕೊಳವೆ ಬಾವಿಗೆ ಬಿದ್ದಿತ್ತು. ಮಗು ರಕ್ಷಣೆಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅಂತಿಮವಾಗಿ ಮಗುವನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ. ಕೊಟ್ಯಂತರ ಜನರು ಮಗುವಿನ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+