ಕಡೂರು : ಕಂದಕಕ್ಕೆ ಉರುಳಿ ಬಿದ್ದ ಕೆಎಸ್ಆರ್‌ಟಿಸಿ ಬಸ್
ಚಿಕ್ಕಮಗಳೂರು, ಮೇ 29 : ಕಡೂರಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. 10 ಪ್ರಯಾಣಿಕರು ಅಪಘಾತದಲ್ಲಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಸಮೀಪ ವೇದಾ ನದಿ ಸೇತುವೆಯಿಂದ ಬಸ್ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರಿದ್ದರು. ಬಸ್ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿತ್ತು.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಸುಮಾರು 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿದ್ದ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕಡೂರು ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ಗಾಯಾಳುಗಳನ್ನು ಕಡೂರು, ಶಿವಮೊಗ್ಗದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಕಡೂರಿನ ವೇದಾನದಿ ಬರಗಾಲದ ಕಾರಣ ಮೂರು ವರ್ಷಗಳಿಂದ ನೀರಿಲ್ಲದೆ ಬತ್ತಿ ಹೋಗಿದೆ. ವೇದಾನದಿ ಪುನಶ್ಚೇತನ ಯೋಜನೆಯಡಿ ತಾಲೂಕಿನಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಆರಂಭಿಸಲಾಗಿದೆ.












Click it and Unblock the Notifications