ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಡೂರು : ಕಂದಕಕ್ಕೆ ಉರುಳಿ ಬಿದ್ದ ಕೆಎಸ್ಆರ್‌ಟಿಸಿ ಬಸ್

By Gururaj
|
Google Oneindia Kannada News

ಚಿಕ್ಕಮಗಳೂರು, ಮೇ 29 : ಕಡೂರಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. 10 ಪ್ರಯಾಣಿಕರು ಅಪಘಾತದಲ್ಲಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಶಿರಾ: ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಬಲಿಶಿರಾ: ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಬಲಿ

ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಸಮೀಪ ವೇದಾ ನದಿ ಸೇತುವೆಯಿಂದ ಬಸ್ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರಿದ್ದರು. ಬಸ್ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿತ್ತು.

20 injured after KSRTC bus overturns in Kadur

ಚಾಲಕನ ನಿಯಂತ್ರಣ ತಪ್ಪಿದ ಬಸ್ ಸುಮಾರು 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿದ್ದ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ

ಅಪಘಾತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕಡೂರು ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ಗಾಯಾಳುಗಳನ್ನು ಕಡೂರು, ಶಿವಮೊಗ್ಗದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಕಡೂರಿನ ವೇದಾನದಿ ಬರಗಾಲದ ಕಾರಣ ಮೂರು ವರ್ಷಗಳಿಂದ ನೀರಿಲ್ಲದೆ ಬತ್ತಿ ಹೋಗಿದೆ. ವೇದಾನದಿ ಪುನಶ್ಚೇತನ ಯೋಜನೆಯಡಿ ತಾಲೂಕಿನಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಆರಂಭಿಸಲಾಗಿದೆ.

English summary
20 passengers injured after Karnataka State Road Transport Corporation (KSRTC) bus overturned in Kadur, Chikkamagalur district on May 29, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X