Karnataka Ministers: "ಪ್ರಮಾಣವಚನ ಸ್ವೀಕರಿಸಿ 3 ದಿನವಾದರೂ 20 ಸಚಿವರಿಗೆ ಹಂಚಿಕೆಯಾಗಿಲ್ಲ ಖಾತೆ; ಕಾರಣ ಇದೇ"

ಕರ್ನಾಟಕ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಹಾಗೂ ಖಾತೆ ಹಂಚಿಕೆಯು ಭಾರೀ ಕಗ್ಗಂಟಾಗಿ ಪರಿಣಮಿಸಿದೆ. ಕರ್ನಾಟಕದಲ್ಲಿ ಕಳೆದ ಎರಡು ತಿಂಗಳಿನಿಂದಲೂ ಸಚಿವ ಸಂಪುಟ ವಿಸ್ತರಣೆ ವಿಚಾರವು ಭಾರೀ ಕಗ್ಗಂಟಾಗಿತ್ತು. ಆದರೆ, ಇದೀಗ ಸಚಿವ ಸಂಪುಟ ವಿಸ್ತರಣೆಯಾದರೂ ಸಹ ಖಾತೆ ಹಂಚಿಕೆಯಾಗದೆ ಇರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ನೂತನ ಸಚಿವರ ಪ್ರಮಾಣ ವಚನಸ್ವೀಕಾರ ಮುಗಿದು ಮೂರು ದಿನಗಳೇ ಕಳೆದಿದ್ದರೂ, ಖಾತೆಗಳ ಸುಳಿವೇ ಇಲ್ಲ ಎಂದು ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಡಮ್ಮಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಪೇಮೆಂಟ್ ಕೋಟಾ ಸಚಿವರಿಗೆ ಖಾತೆ ಹಂಚಲು ಹೈಕಮಾಂಡ್ ಅನುಮತಿಗಾಗಿ ಕಾಯುತ್ತಿದ್ದೀರೋ ಅಥವಾ ನಿಗದಿಯಾದ ಪೇಮೆಂಟ್ ಇನ್ನೂ ಖಾತೆಗೆ (Account) ಜಮಾ ಆಗಿಲ್ಲವೆಂದು ತಡೆ ಹಿಡಿದಿದ್ದೀರೋ ಎಂದು ಪ್ರಶ್ನಿಸಿದ್ದಾರೆ.

Karnataka Ministers

ಅಲ್ಲದೆ ಇತ್ತ ದೆಹಲಿಯ ಕಲೆಕ್ಷನ್ ಏಜೆಂಟ್ ರಣದೀಪ್ ಸುರ್ಜೇವಾಲಾ ಸಾಹೇಬರು, ಅಸಮಾಧಾನಗೊಂಡ ಶಾಸಕರ ಮನೆ ಮನೆಗೆ ತೆರಳಿ ತೇಪೆ ಹಚ್ಚುವುದರಲ್ಲಿ ಹಾಗೂ ಕುಸಿಯುತ್ತಿರುವ ಸರ್ಕಾರಕ್ಕೆ 'ಪ್ಯಾಚ್‌ ವರ್ಕ್‌' ಹಾಕುವುದರಲ್ಲೇ ಬ್ಯುಸಿ! ಅಂದಹಾಗೆ, ಇನ್ನುಮುಂದೆ ಪ್ರತಿಯೊಂದು ಕಡತಕ್ಕೂ ಸಹಿ ಹಾಕಲು ಸುರ್ಜೇವಾಲಾ ಅವರೇ ಬೆಂಗಳೂರಿಗೆ ಬರಬೇಕಾ? ವಿಧಾನಸೌಧದಲ್ಲಿ ಅವರಿಗೆ ಒಂದು ಕೊಠಡಿ ಮೀಸಲಿಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಅಥವಾ ಎಲ್ಲಾ ಫೈಲ್‌ಗಳನ್ನ ದೆಹಲಿಗೆ ಸ್ಪೀಡ್‌ ಪೋಸ್ಟ್‌ನಲ್ಲಿ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದೀರಾ 'ರಬ್ಬರ್ ಸ್ಟ್ಯಾಂಪ್' ಮುಖ್ಯಮಂತ್ರಿಗಳೇ. ಕರ್ನಾಟಕದಲ್ಲಿ ನಿಜವಾದ ಸರ್ಕಾರ ನಡೀತಾ ಇದೆಯೋ ಅಥವಾ ದೆಹಲಿಯ ಹೈಕಮಾಂಡ್‌ನ 'ರಿಮೋಟ್‌ ಕಂಟ್ರೋಲ್' ಹೈಜಾಕ್ ನಾಟಕ ನಡೀತಾ ಇದೆಯೋ ಜನತೆಗಂತೂ ಸ್ಪಷ್ಟವಾಗಿ ಅರ್ಥವಾಗುತ್ತಿದೆ.

ನೇಮಕಾತಿ ಅಧಿಸೂಚನೆ ವಿಷಯದಲ್ಲೂ ಗೊಂದಲ

ನೇಮಕಾತಿ ಅಧಿಸೂಚನೆ ಹೊರಡಿಸಿ, ಉದ್ಯೋಗಾಕಾಂಕ್ಷಿಗಳನ್ನೇ ಗೊಂದಲಕ್ಕೆ ತಳ್ಳಿರುವ ಕಾಂಗ್ರೆಸ್ ಸರ್ಕಾರ ಎಂದೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯಲ್ಲಿ "ಉದ್ಯೋಗಕ್ಕಾಗಿ ಪಡೆದ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನೇ ಪರಿಗಣಿಸಲಾಗುತ್ತದೆ" ಎಂಬ ಷರತ್ತಿನಿಂದ ಸಾವಿರಾರು ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ವರ್ಷಗಳಿಂದ ಮಾನ್ಯವಾಗಿರುವ ಪ್ರಮಾಣಪತ್ರಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಈಗ ಅವುಗಳನ್ನು ರದ್ದು ಮಾಡಿ ಹೊಸದಾಗಿ ಅರ್ಜಿ ಸಲ್ಲಿಸುವ ಅನಿವಾರ್ಯತೆ ಎದುರಾಗಿದೆ. ಈ ಪ್ರಕ್ರಿಯೆಯಿಂದ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದೊಳಗೆ ದಾಖಲೆಗಳನ್ನು ಪಡೆಯಲು ಸಾಧ್ಯವಾಗದೆ ಸಾವಿರಾರು ಉದ್ಯೋಗಾಕಾಂಕ್ಷಿಗಳು ಆತಂಕದಲ್ಲಿದ್ದಾರೆ. ಒಂದು ಕಡೆ ಸರ್ಕಾರಿ ಉದ್ಯೋಗಗಳ ಅಧಿಸೂಚನೆ, ಮತ್ತೊಂದು ಕಡೆ ಅವೈಜ್ಞಾನಿಕ ನಿಯಮಗಳಿಂದ ಅಭ್ಯರ್ಥಿಗಳಿಗೆ ಮಾನಸಿಕ ಕಿರುಕುಳ. ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸುವ ಬದಲು ಮತ್ತಷ್ಟು ಗೊಂದಲ ಗೊಳಿಸುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಈಗಾಗಲೇ ಮಾನ್ಯವಾಗಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಅರ್ಜಿಗೆ ಪರಿಗಣಿಸುವಂತೆ ಆದೇಶಿಸಬೇಕು. ಉದ್ಯೋಗಾಕಾಂಕ್ಷಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುವುದನ್ನು ಕಾಂಗ್ರೆಸ್ ಸರ್ಕಾರ ಈ ಕೂಡಲೇ ನಿಲ್ಲಿಸಬೇಕು ಎಂದೂ ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+