Get Updates
Get notified of breaking news, exclusive insights, and must-see stories!

20 + ಶಾಸಕರ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿದೇಶ ಪ್ರವಾಸ: ಸಿ.ಎಂ ಸಿದ್ದರಾಮಯ್ಯ ಬೆಂಬಲಿಗರ ಪ್ಲ್ಯಾನ್ ಏನು

ಕರ್ನಾಟಕದ ರಾಜಕೀಯದಲ್ಲಿ ಹಲವು ವರ್ಷಗಳ ನಂತರ ರಾಜಕಾರಣಿಗಳ ವಿದೇಶ ಪ್ರವಾಸ ಹಾಗೂ ರೆಸಾರ್ಟ್ ರಾಜಕೀಯ ಚರ್ಚೆಯ ಮುನ್ನೆಲೆಗೆ ಬಂದಿದೆ. ಸಾಮಾನ್ಯವಾಗಿ ಅತಂತ್ರ ರಾಜಕೀಯ ಪರಿಸ್ಥಿತಿ ಅಥವಾ ಮೈತ್ರಿ ಪಕ್ಷಗಳ ಬೆಂಬಲ ಇರುವ ಸಂದರ್ಭಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ರಾಜಕೀಯ ಬಿಕ್ಕಟ್ಟು ಈ ಬಾರಿ ಸುಭದ್ರ ಬಹುಮತವಿದ್ದರೂ, ಕಾಂಗ್ರೆಸ್‌ನಲ್ಲಿ ಬಣರಾಜಕೀಯ ಜೋರಾಗಿದೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆಯು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ 20 ಆಪ್ತ ಕಾಂಗ್ರೆಸ್ ನಾಯಕರು ವಿದೇಶ ಪ್ರವಾಸಕ್ಕೆ ಮುಂದಾಗಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವು ಮತ್ತೆ ಚರ್ಚೆಯ ಮುನ್ನೆಲೆ ಬಂದಿದ್ದು, ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಹುದ್ದೆಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶತಪ್ರಯತ್ನ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಡುವೆ ಅಧಿಕಾರ ಹಂಚಿಕೆಯ ಬಗ್ಗೆ ಚರ್ಚೆ ನಡೆದಿತ್ತು, ಒಪ್ಪಂದವೂ ಆಗಿತ್ತು ಎನ್ನುವ ವಿಚಾರವು ಈಚೆಗೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2.5 ವರ್ಷ ಆಡಳಿತ ನಡೆಸಿದ್ದು, ಬಜೆಟ್ ಮಂಡನೆಯ ನಂತರ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಡುವ ಸಾಧ್ಯತೆ ಇದೆ ಎನ್ನುವ ಚರ್ಚೆಗಳು ನಡೆದಿದ್ದವು. ಈ ನಡುವೆ ಕಾಂಗ್ರೆಸ್‌ನ ಶಾಸಕರು ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ ಶಾಸಕರು ಒಂದಾಗಿ ವಿದೇಶ ಪ್ರವಾಸ ಮಾಡುವುದಕ್ಕೆ ಮುಂದಾಗಿರುವುದು ಭಾರೀ ಕುತೂಹಲ ಕೆರಳಿಸಿದೆ.

CM Change Buzz

ಬೆಂಗಳೂರಿನಿಂದ 20ಕ್ಕೂ ಹೆಚ್ಚು ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯ ವಿದೇಶ ಪ್ರವಾಸ ಮಾಡುತ್ತಿದ್ದಾರೆ. ಈ ಪ್ರವಾಸದಲ್ಲಿ 17 ಜನ ಕಾಂಗ್ರೆಸ್ ಶಾಸಕರು ಹಾಗೂ ಮೂವರು ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯರು ಇದ್ದಾರೆ. ಮಂಗಳವಾರ ಬೆಂಗಳೂರಿನಿಂದ ಮೊದಲಿಗೆ ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ತಂಡವು, ಆ ನಂತರ ನ್ಯೂಜಿಲೆಂಡ್‌ಗೆ ತೆರಳಲಿದೆ. ಪಶುಸಂಗೋಪನಾ ಸಚಿವ ಹಾಗೂ ಮುಖ್ಯಮಂತ್ರಿ ಆಪ್ತರಾದ ಕೆ.ವೆಂಕಟೇಶ್ ಅವರ ನೇತೃತ್ವ ಹಾಗೂ ಹಾಗೂ ಅದೇ ಇಲಾಖೆಯಿಂದ ಈ ವಿದೇಶ ಪ್ರವಾಸವನ್ನು ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯ ಸಂದರ್ಭದಲ್ಲಿ ಈ ವಿದೇಶ ಪ್ರವಾಸ ನಡೆಯುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಶಾಸಕ ವಿದೇಶ ಪ್ರವಾಸವು ಸುದೀರ್ಘ ಅವಧಿಯದ್ದಾಗಿದೆ. ಈ ಶಾಸಕರು ಮಾರ್ಚ್‌ 3ಕ್ಕೆ ಕರ್ನಾಟಕಕ್ಕೆ ಹಿಂದಿರುಗಲಿದ್ದಾರೆ.

ವಿದೇಶ ಪ್ರವಾಸದಲ್ಲಿರುವ ಪ್ರಮುಖ ಸಚಿವರು, ಶಾಸಕರು

ಸಚಿವ ಕೆ.ವೆಂಕಟೇಶ್‌, ಶಾಸಕರಾದ ಪುಟ್ಟರಂಗಶೆಟ್ಟಿ, ಎಚ್.ಡಿ.ತಮ್ಮಯ್ಯ, ಹಂಪನಗೌಡ ಬಾದರ್ಲಿ, ದೇವೇಂದ್ರಪ್ಪ, ಯಶವಂತರಾಯ ಗೌಡ ಪಾಟೀಲ್, ಬಿ.ಎಂ ನಾಗರಾಜ, ಜೆ.ಟಿ ಪಾಟೀಲ್, ಅಲ್ಲಮ ಪ್ರಭು ಪಾಟೀಲ್, ಬಸನಗೌಡ ದದ್ದಲ, ಎ.ಆರ್. ಕೃಷ್ಣಮೂರ್ತಿ, ಬಸನಗೌಡ ತುರವೀಹಾಳ, ಚಿಮ್ಮನಕಟ್ಟಿ, ಮಹಾಂತೇಶ ಕೌಜಲಗಿ, ರಾಘವೇಂದ್ರ ಹಿಟ್ನಾಳ್, ರಘುಮೂರ್ತಿ ಮತ್ತು ಅನಿಲ್ ಚಿಕ್ಕಮಾದು ಇದ್ದಾರೆ. ಇನ್ನು ವಿಧಾನ ಪರಿಷತ್ತಿನ ಸದಸ್ಯರಾದ ವಸಂತ ಕುಮಾರ್, ತಿಮ್ಮಯ್ಯ, ಶರಣಗೌಡ ಬಯ್ಯಾಪುರ ಇದ್ದಾರೆ.

ಸಿ.ಎಂ ಸಿದ್ದರಾಮಯ್ಯ ಬೆಂಬಲಿಗರ ಪ್ಲ್ಯಾನ್ ಏನು

ಇನ್ನು ಶಾಸಕರು ದಿಢೀರ್ ವಿದೇಶ ಪ್ರವಾಸವು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡದಂತೆ ಒತ್ತಡ ಹೇರುವ ಕಾರ್ಯತಂತ್ರದ ವಿಧಾನವಾಗಿರುವ ಸಾಧ್ಯತೆ ಇದೆ ಎನ್ನುವ ಚರ್ಚೆ ಶುರುವಾಗಿದೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆ ಶುರುವಾದಾಗಿನಿಂದಲೂ ಸಿದ್ದರಾಮಯ್ಯ ಅವರಿಗೆ ಹೆಚ್ಚು ಶಾಸಕರ ಬೆಂಬಲವಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಹೋಲಿಕೆ ಮಾಡಿದರೆ ಸಿದ್ದರಾಮಯ್ಯ ಅವರಿಗೆ ಹೆಚ್ಚು ಶಾಸಕರು ಬೆಂಬಲಿಸುತ್ತಿದ್ದಾರೆ ಎನ್ನುವ ವಾದವಿದೆ. ಹೀಗಾಗಿ, ಇದು ಒತ್ತಡದ ಕಾರ್ಯತಂತ್ರವಾಗಿರುವ ಸಾಧ್ಯತೆ ಹೆಚ್ಚಾಗಿದೆ. ಇದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬಣದ ಶಾಸಕರು ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+