ಶನಿವಾರ ಸಂಪುಟ ವಿಸ್ತರಣೆ : ಎಚ್ಡಿಕೆ ಸಂಪುಟ ಸೇರಲಿದ್ದಾರೆ 20 ಶಾಸಕರು

ಬೆಂಗಳೂರು, ಜೂನ್ 01 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ಶನಿವಾರ ಸಂಪುಟ ವಿಸ್ತರಣೆ ನಡೆಯಲಿದ್ದು, ರಾಜಭವನದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್‌ನ 12, ಜೆಡಿಎಸ್‌ನ 8 ಶಾಸಕರು ಕುಮಾರಸ್ವಾಮಿ ಸಂಪುಟ ಸೇರಲಿದ್ದಾರೆ. ಶುಕ್ರವಾರ ಮಧ್ಯಾಹ್ನ ಎಚ್.ಡಿ.ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ನೂತನ ಸಚಿವರ ಪಟ್ಟಿಯನ್ನು ನೀಡಲಿದ್ದಾರೆ.

20 MLAs will join HD Kumaraswamy cabinet on June 2

ಖಾತೆಗಳ ಹಂಚಿಕ ಬಗ್ಗೆ ಇದ್ದ ಗೊಂದಲ ನಿವಾರಣೆಯಾಗಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಇಂದು 12 ಗಂಟೆಗೆ ಅಂತಿಮ ಸುತ್ತಿನ ಸಭೆ ನಡೆಯಲಿದೆ. ಕುಮಾರಸ್ವಾಮಿ, ಜಿ.ಪರಮೇಶ್ವರ, ಕೆ.ಸಿ.ವೇಣುಗೋಪಾಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಯಾವ ಪಕ್ಷಕ್ಕೆ ಯಾವ ಖಾತೆ : ಕಾಂಗ್ರೆಸ್-ಜೆಡಿಎಸ್ ನಡುವೆ ಖಾತೆ ಹಂಚಿಕೆಯೂ ಅಂತಿಮಗೊಂಡಿದೆ. ಹಣಕಾಸು ಸೇರಿದಂತೆ ಪ್ರಮುಖ ಖಾತೆಗಳನ್ನು ಜೆಡಿಎಸ್‌ಗೆ ಬಿಟ್ಟಕೊಡಲಾಗಿದೆ. ಗೃಹ ಖಾತೆ ಕಾಂಗ್ರೆಸ್ ಪಕ್ಷದ ಪಾಲಾಗಲಿದೆ.

ಜೆಡಿಎಸ್ : ಹಣಕಾಸು, ಇಂಧನ, ಲೋಕೋಪಯೋಗಿ, ಸಹಕಾರ, ಅಬಕಾರಿ ಸೇರಿದಂತೆ ಪ್ರಮುಖ ಖಾತೆಗಳನ್ನು ತನ್ನ ಬಳಿ ಇಟ್ಟುಕೊಂಡಿದೆ.

ಕಾಂಗ್ರೆಸ್‌ : ಗೃಹ, ಕಂದಾಯ, ಆರೋಗ್ಯ, ಪಂಚಾಯತ್ ರಾಜ್, ಜಲಸಂಪನ್ಮೂಲ, ವಸತಿ, ಗಣಿ, ಕೃಷಿ, ಸಮಾಜ ಕಲ್ಯಾಣ ಖಾತೆಗಳು ಕಾಂಗ್ರೆಸ್ ಪಾಲಾಗಲಿವೆ.

ಎಚ್.ಡಿ.ದೇವೇಗೌಡರ ಪದ್ಮನಾಭನಗರ ನಿವಾಸದಲ್ಲಿ 12 ಗಂಟೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರ ಸಭೆ ನಡೆಯಲಿದ್ದು, ಸಭೆಯಲ್ಲಿ ಖಾತೆ, ಸಂಪುಟ ಸೇರುವವರ ಪಟ್ಟಿ ಅಂತಿಮಗೊಳ್ಳಲಿದೆ. ಮಧ್ಯಾಹ್ನ ರಾಜ್ಯಪಾಲರನ್ನು ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಸಚಿವರ ಪಟ್ಟಿಯನ್ನು ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+