20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆ ಆರಂಭ: ಯಾವ ಜಿಲ್ಲೆಯಲ್ಲಿ ಎಲ್ಲಿ?

ಬೆಂಗಳೂರು, ಜುಲೈ 18: ಕರ್ನಾಟಕ ಸರ್ಕಾರ 2024-25ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಹೋಬಳಿ ಮಟ್ಟದಲ್ಲಿ 20 ಹೊಸ ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದೆ. ಷರತ್ತುಗಳ ಅನ್ವಯ ಹೊಸ ಶಾಲೆಗಳನ್ನು ಆರಂಭಿಸಲಾಗುತ್ತಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಂ. ಸುಮಿತ್ರ, ಸರ್ಕಾರದ ಉಪ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದಾರೆ. ಆದೇಶ ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಮೂಲ ಪ್ರಾರಂಭಿಸುವ ಕುರಿತು ಎಂಬ ವಿಷಯ ಒಳಗೊಂಡಿದೆ.

20 New Residential Schools At Hobli Level List

2024-25ನೇ ಸಾಲಿನ ಆಯವ್ಯಯದ ಕಂಡಿಕೆ-163ರಲ್ಲಿ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದೆಂದು ಘೋಷಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ರಾಜ್ಯದ 31 ಜಿಲ್ಲೆಗಳು, 231 ತಾಲ್ಲೂಕುಗಳಲ್ಲಿ 770 ಹೋಬಳಿಗಳ ಪೈಕಿ, ಪರಿಶಿಷ್ಟ ಜಾತಿ 503, ಪರಿಶಿಷ್ಟ ವರ್ಗದ 144 ಹಾಗೂ ಹಿಂದುಳಿದ ವರ್ಗದ 174 ವಸತಿ ಶಾಲೆಗಳು ಒಟ್ಟಾರೆ 821 ವಸತಿ ಶಾಲೆ/ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರು ನಗರ ಮತ್ತು ಕಸಬಾ ಹೋಬಳಿಗಳನ್ನು ಹೊರತುಪಡಿಸಿ, ಒಟ್ಟು 114 ಹೋಬಳಿಗಳಲ್ಲಿ ವಸತಿ ಶಾಲೆಗಳು ಇರುವುದಿಲ್ಲ.

2024-25ನೇ ಸಾಲಿನ ಆಯವ್ಯಯದಲ್ಲಿ 20 ಹೋಬಳಿಗಳಲ್ಲಿ ಹೊಸ ಶಾಲೆಗಳನ್ನು ಮಂಜೂರು ಮಾಡಲು ಹಾಗೂ ಪ್ರತಿ ಶಾಲೆಗೆ 8 ರಿಂದ 10 ಎಕರೆ ಜಮೀನಿನ ಅವಶ್ಯಕತೆ ಇದ್ದು, 31 ಜಿಲ್ಲೆಗಳ ಪೈಕಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳು ಮತ್ತು ಎಲ್ಲಾ ತಾಲ್ಲೂಕುಗಳಲ್ಲಿ ವಸತಿ ಶಾಲೆಗಳಿಲ್ಲದ ಕಸಬಾ ಹೋಬಳಿಗಳನ್ನು ಹಾಗೂ ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದೇ ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳು ಇದ್ದು, ಈ ಪೈಕಿ ಹಾಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ 9 ಶಾಲೆಗಳನ್ನು ಸ್ಥಳಾಂತರಿಸಬಹುದಾಗಿರುತ್ತದೆ.

ಈ ಶಾಲೆಗಳನ್ನು ಹೊರತುಪಡಿಸಿ, 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಮಂಜೂರು ಮಾಡುವಂತೆ ಕೋರಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

2024-253 ಸಾಲಿನ ಆಯವ್ಯಯದ ಕಂಡಿಕೆ-163ರಲ್ಲಿ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪ್ರತಿ 20 ಹೋಬಳಿಗಳಲ್ಲಿ 20 ವಸತಿ ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿರುವ ಪ್ರಸ್ತಾವನೆಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಗಳು ಸಹಮತಿ ನೀಡಿರುವಂತೆ ಆದೇಶಿಸಿದೆ.

ಆದೇಶ, ಷರತ್ತುಗಳು ಏನು?; ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ 20 ಹೊಸ ವಸತಿ ಶಾಲೆಗಳನ್ನು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ಪ್ರಾರಂಭಿಸಲು
ಆದೇಶಿಸಿದೆ.

ಷರತ್ತುಗಳು

* ಸದರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಹುದ್ದೆಗಳ ಸೃಜನೆ/ ಆವರ್ತಕ/ ಅನಾವರ್ತಕ ವೆಚ್ಚದ ಸಂಪೂರ್ಣ ಮಾಹಿತಿಯೊಂದಿಗೆ ಸಹಮತಿಯನ್ನು ಪಡೆಯಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವುದು.

* ಸದರಿ ಕಾರ್ಯಕ್ರಮಗಳನ್ನು ಮಾರ್ಗಸೂಚಿಯನ್ವಯ, ಪಾರದರ್ಶಕತೆಯಿಂದ ನಿಯಮಾನುಸಾರ ಅನುಷ್ಠಾನಗೊಳಿಸುವುದು.

ಯಾವ ಜಿಲ್ಲೆಯ ಯಾವ ತಾಲೂಕಿನ ಯಾವ ಹೋಬಳಿಯಲ್ಲಿ ವಸತಿ ಶಾಲೆ ಆರಂಭವಾಗಲಿದೆ? ಎಂಬ ಮಾಹಿತಿ ಚಿತ್ರದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+