ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮಾರಂಭಗಳಿಗೆ 200 ಜನರ ಮಿತಿ ಡಿ.31ರ ತನಕ ವಿಸ್ತರಣೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 02: ಕೋವಿಡ್ ಹರಡುವಿಕೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಕೇಂದ್ರ ಗೃಹ ಸಚಿವಾಲಯ ಕಂಟೈನ್ಮೆಂಟ್ ವಲಯಗಳಲ್ಲಿನ ಲಾಕ್‍ ಡೌನ್ ಅವಧಿಯನ್ನು ಡಿಸೆಂಬರ್ 31ರ ತನಕ ವಿಸ್ತರಣೆ ಮಾಡಿದೆ.

ಕಂಟೈನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಪುನರಾರಂಭಿಸಲು ಸೂಚಿಸಲಾಗಿದೆ. ಆದರೆ, ಅವುಗಳಿಗೆ ಸಹ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಕಂಟೈನ್ಮೆಂಟ್ ವಲಯಗಳ ಹೊರಗೆ ಮಾರ್ಗಸೂಚಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಗೃಹ ಸಚಿವಾಲಯದ ಹೊಸ ಮಾರ್ಗಸೂಚಿ: ಯಾವುದಕ್ಕೆ ಅವಕಾಶ? ಯಾವುದಕ್ಕೆ ನಿರ್ಬಂಧ?ಗೃಹ ಸಚಿವಾಲಯದ ಹೊಸ ಮಾರ್ಗಸೂಚಿ: ಯಾವುದಕ್ಕೆ ಅವಕಾಶ? ಯಾವುದಕ್ಕೆ ನಿರ್ಬಂಧ?

ಈ ಮಾರ್ಗಸೂಚಿ ಡಿಸೆಂಬರ್ 1 ರಿಂದ 31ರ ತನಕ ಚಾಲ್ತಿಯಲ್ಲಿರುತ್ತದೆ. ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸ್ಥಳೀಯ ಆಡಳಿ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆಗಳನ್ನು ಕೊಡಲಾಗಿದೆ.

ಭಾರತದ ಕಂಟೇನ್ಮೆಂಟ್ ಝೋನ್ ಮಾರುಕಟ್ಟೆಗಳಿಗೆ ಹೊಸ ಮಾರ್ಗಸೂಚಿಭಾರತದ ಕಂಟೇನ್ಮೆಂಟ್ ಝೋನ್ ಮಾರುಕಟ್ಟೆಗಳಿಗೆ ಹೊಸ ಮಾರ್ಗಸೂಚಿ

200 Person Limit To Gatherings Extended Till December 31

ಜನರು ಕೋವಿಡ್‌ನಿಂದ ರಕ್ಷಣೆ ಪಡೆಯಲು ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ಮಾಸ್ಕ್‌ ಧರಿಸದಿದ್ದರೆ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ. 250, ಗ್ರಾಮಾಂತರ ಪ್ರದೇಶದಲ್ಲಿ ರೂ.100 ದಂಡ ವಿಧಿಸಲಾಗುತ್ತದೆ.

 ಮುಂದಿನ ಮಾರ್ಗಸೂಚಿ ನಂತರ ಕಂಬಳ ಆಯೋಜನೆಯ ತೀರ್ಮಾನ ಮುಂದಿನ ಮಾರ್ಗಸೂಚಿ ನಂತರ ಕಂಬಳ ಆಯೋಜನೆಯ ತೀರ್ಮಾನ

ಅವಶ್ಯಕ ವಸ್ತುಗಳ ಸಾಗಾಟ; ಕಂಟೈನ್ಮೆಂಟ್ ಝೋನ್‌ಗಳಲ್ಲಿ ಕೇವಲ ಅತ್ಯಾವಶ್ಯಕ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಈ ವಲಯಗಳ ಒಳಗೆ ಅಥವಾ ಹೊರಗೆ ವೈದ್ಯಕೀಯ ತುರ್ತು ಸಂದರ್ಭ, ಅತ್ಯವಶ್ಯಕ ಸರಕು ಸೇವೆಗಳ ಪೂರೈಕೆ ಹೊರತುಪಡಿಸಿ ಜನರು ಸಂಚಾರ ನಡೆಸುವಂತಿಲ್ಲ.

ಕಂಟೈನ್ಮೆಂಟ್ ಝೋನ್ ಹೊರಗೆ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಸಂಚಾರಕ್ಕೆ ಅನುಮತಿ ಮುಂದುವರೆಯಲಿದೆ. ಸಿನಿಮಾ ಹಾಗೂ ರಂಗಮಂದಿರಗಳು ಶೇ.50 ರಷ್ಟು ಆಸನಗಳೊಂದಿಗೆ ಕಾರ್ಯ ನಿರ್ವಹಣೆ ಮಾಡಬಹುದು.

ಕ್ರೀಡಾಪಟುಗಳ ತರಬೇತಿಗೆ ಈಜುಕೊಳ, ವ್ಯಾಪಾರ ಉದ್ದೇಶಕ್ಕಾಗಿ ವಸ್ತುಪ್ರದರ್ಶನ ಹಾಲ್‍, ಒಳಾಂಗಣ ಸ್ಥಳಗಳಲ್ಲಿ 200 ಜನರ ಮಿತಿಗೊಳಪಟ್ಟು ಸಾಮಾಜಿಕ, ಧಾರ್ಮಿಕ, ಕ್ರೀಡಾ, ಮನೋರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮ ನಡೆಸಬಹುದು.

English summary
In non containment zone people who can attend marriage, meetings. 200 person limit to gatherings till December 31, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X