ಕಿತ್ತೂರು ರಾಣಿ ಚೆನ್ನಮ್ಮ ಸಂಗ್ರಾಮಕ್ಕೆ 200 ವರ್ಷ: ಕೇಂದ್ರದಿಂದ ವಿಶೇಷ ಗೌರವ, ಏನದು ?

ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮಕ್ಕೆ 200 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ವಿಶೇಷ ಗೌರವವನ್ನು ಸಲ್ಲಿಸಿದೆ. ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಸೆಣಸಾಡಿದ್ದರು. ವಿಜಯದ ಜ್ಞಾಪಕಾರ್ಥವಾಗಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮಕ್ಕೆ 200 ವರ್ಷ ಆಗುತ್ತಿದೆ. ಈ ಹಿನ್ನೆಲೆ ಅಕ್ಟೋಬರ್‌ 23ರಂದು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡಲಾಗುತ್ತಿದೆ.

200 Years of Rani Chennamma Kittur war victory Special tribute from the Centre what

ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿದ್ದಾರೆ. ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಅವರು ಟ್ವೀಟ್‌ ಮಾಡಿದ್ದಾರೆ.

ಇದೇ ಅಕ್ಟೋಬರ್ 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ 200 ವರ್ಷ ಸಂದಲಿವೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದಿದ್ದಾರೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು ಮನವಿ ಮಾಡಿದ್ದರು.

ಕಿತ್ತೂರ ಉತ್ಸವ: ಇನ್ನು ಕಿತ್ತೂರು ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದರೂ, ರಾಣಿ ಚೆನ್ನಮ್ಮ ಸಮಾಧಿ ಸ್ಥಳ ಬೈಲಹೊಂಗಲ ನಿರ್ಲಕ್ಷ್ಯ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಇದೀಗ ಅಕ್ಟೋಬರ್‌ 28ರಂದು ರಾಜ್ಯ ಸರ್ಕಾರದಿಂದಲೇ ಬೈಲಹೊಂಗಲ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲು ನಿರ್ಧರಿಸಲಾಗಿದೆ.

ವಿಜಯೋತ್ಸವದ ಭಾಗವಾಗಿ ಚೆನ್ನಮ್ಮನ ಸಮಾಧಿ ಸ್ಥಳದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಿದ್ದು, ಅಲಂಕಾರಕ್ಕೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇನ್ನು ಶಾಲಾ-ಕಾಲೇಜುಗಳಿಂದ ರೂಪಕಗಳು, ಭವ್ಯ ಮೆರವಣಿಗೆ, ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಈಚೆಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+