ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಎಚ್.ಎಸ್.ದೊರೆಸ್ವಾಮಿ ಆಯ್ಕೆ
ಬೆಂಗಳೂರು, ಸೆಪ್ಟೆಂಬರ್ 26 : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರನ್ನು ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 2ರಂದು ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಕರ್ನಾಟಕ ರಾಜ್ಯ ಸರ್ಕಾರ 'ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ' ಯನ್ನು ಪ್ರತಿ ವರ್ಷ ನೀಡುತ್ತದೆ. 2017ನೇ ಸಾಲಿನ ಪ್ರಶಸ್ತಿಗೆ ಎಚ್.ಎಸ್.ದೊರೆಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ನೀಡಲಿದ್ದಾರೆ.

ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖಾಂತರ ಕಳೆದ 4 ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. 20017 ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.
ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಈ ಪ್ರಶಸ್ತಿಯು 5 ಲಕ್ಷ ರೂ. ಗಳನ್ನು ಒಳಗೊಂಡಿರುತ್ತದೆ.












Click it and Unblock the Notifications