2018ರ ಚುನಾವಣೆ: 700 ಮತಕ್ಕೂ ಕಮ್ಮಿ ಅಂತರದಿಂದ ಸೋತವರಿವರು
ಬೆಂಗಳೂರು, ಮಾರ್ಚ್ 27: ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬಂದಂತೆ ಮತವಾರು ಲೆಕ್ಕಾಚಾರದ ಅಂಕಿಅಂಶಗಳು ಮತ್ತೆ ಮಹತ್ವ ಪಡೆದುಕೊಂಡಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾರು ಯಾವ ಕ್ಷೇತ್ರದಿಂದ ಸ್ಫರ್ಧೆ ಮಾಡುತ್ತಾರೆ. ಕಳೆದ ಬಾರಿ ಪಡೆದ ಮತಗಳು ಎಷ್ಟು ಎಂಬೆಲ್ಲಾ ಲೆಕ್ಕಾಚಾರ ಶುರುವಾಗುತ್ತದೆ. ಈ ಹಿನ್ನೆಲೆಯಲ್ಲಿ 700 ಮತಗಳ ಅಂತರದಿಂದ ಸೋತ ಅಭ್ಯರ್ಥಿಗಳು ಯಾರೆಂದು ತಿಳಿಯೋಣ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಇನ್ನೇನು ಕೆಲವೇ ದಿನಗಳಲ್ಲಿ ಘೋಷಣೆಯಾಗಲಿದೆ, ಕಳೆದ ವಿಧಾನಸಭಾ ಚುನಾವಣೆ 2018ರಲ್ಲಿ ನಡೆಡಿತ್ತು. ಇಲ್ಲಿ 700 ಮತಗಳ ಅಂತರದಿಂದ ಸೋತ ಅಭ್ಯರ್ಥಿಗಳು ಇಂತಿದ್ದಾರೆ. ಮೊದಲಿಗೆ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಬಿ.ಆರ್.ಪಾಟೀಲ್ ತಮ್ಮ ಎದುರಾಳಿ ಅಭ್ಯರ್ಥಿ ವಿರುದ್ಧ ಕೇವಲ 697 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.

ಬಿಆರ್ ಪಾಟೀಲ್ ಅವರು ಬಿಜೆಪಿಯ ಸುಭಾಷ್ ಆರ್. ಗುತ್ತೇದಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸುಭಾಷ್ ಆರ್. ಗುತ್ತೇದಾರ್ 76,815 ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದರೆ, ಕಾಂಗ್ರೆಸ್‌ನ ಬಿ ಆರ್ ಪಾಟೀಲ್ ಅವರು 76,118 ಮತಗಳನ್ನು ಪಡೆದು ಕೇವಲ 697 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.
ಎರಡನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಬಸವನಗೌಡ ತೂರ್ವಿಹಾಳ್ ತಮ್ಮ ಎದುರಾಳಿ ಅಭ್ಯರ್ಥಿ ವಿರುದ್ಧ ಕೇವಲ 213 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಸನಗೌಡ ತುರ್ವಿಹಾಳ ಅವರು 60,387 ಮತಗಳನ್ನು ಪಡೆದರೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಬಸವನಗೌಡ ತೂರ್ವಿಹಾಳ್ ಅವರು 60,174 ಮತಗಳನ್ನು ಪಡೆದಿದ್ದರು. ಅವರು ಕೇವಲ 213 ಮತಗಳನ್ನು ಪಡೆದು ಸೋಲು ಕಂಡಿದ್ದರು.

ಆದರೆ ಬಳಿಕ 2021ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಮಸ್ಕಿ ವಿಧಾನಸಭಾ ಚುನಾವಣೆಯಲ್ಲಿ ಬಸನಗೌಡ ತೂರ್ವಿಹಾಳ್ ಅವರು 86,337 ಮತಗಳನ್ನು ಪಡೆದು ವಿಜಯಶಾಲಿಯಾದರೆ ಇವರು ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಪ್ರತಾಪ್ ಗೌಡ ಪಾಟೀಲ್ ಅವರು 55,731 ಮತಗಳನ್ನು ಪಡೆದು 30,606 ಮತಗಳ ಅಂತರದಿಂದ ಸೋಲು ಕಂಡಿದ್ದರು.
ಮೂರನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸಿ.ಎಸ್.ಈಶ್ವರಗಾದ ತಮ್ಮ ಎದುರಾಳಿ ಅಭ್ಯರ್ಥಿ ವಿರುದ್ಧ ಕೇವಲ 634 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕುಸುಮಾವತಿ ಸಿ ಶಿವಳ್ಳಿ ಅವರು 77,640 ಮತಗಳನ್ನು ಪಡೆದರೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಸಿ.ಎಸ್.ಈಶ್ವರಗಾದ ಅವರು 76,039 ಮತಗಳನ್ನು ಪಡೆದಿದ್ದರು. ಅವರು ಕೇವಲ 634 ಮತಗಳನ್ನು ಪಡೆದು ಸೋಲು ಕಂಡಿದ್ದರು.

ನಾಲ್ಕನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಯು.ಬಿ.ಬಣಕರ್ ತಮ್ಮ ಎದುರಾಳಿ ಅಭ್ಯರ್ಥಿ ವಿರುದ್ಧ ಕೇವಲ 555 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ.ಸಿ. ಪಾಟೀಲ್ ಅವರು 72,461 ಮತಗಳನ್ನು ಪಡೆದರೆ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಯು.ಬಿ.ಬಣಕರ್ ಅವರು 71906 ಮತಗಳನ್ನು ಪಡೆದಿದ್ದರು. ಅವರು ಕೇವಲ 555 ಮತಗಳನ್ನು ಪಡೆದು ಸೋಲು ಕಂಡಿದ್ದರು.
ನಾಲ್ಕನೇಯದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆ.ಎಂ.ತಿಮ್ಮರಾಯಪ್ಪ ತಮ್ಮ ಎದುರಾಳಿ ಅಭ್ಯರ್ಥಿ ವಿರುದ್ಧ ಕೇವಲ 409 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವೆಂಕಟರಮಣಪ್ಪ ಅವರು 72,974 ಮತಗಳನ್ನು ಪಡೆದರೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದ ಕೆ.ಎಂ.ತಿಮ್ಮರಾಯಪ್ಪ ಅವರು 72,565 ಮತಗಳನ್ನು ಪಡೆದಿದ್ದರು. ಅವರು ಕೇವಲ 409 ಮತಗಳನ್ನು ಪಡೆದು ಸೋಲು ಕಂಡಿದ್ದರು.
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು












Click it and Unblock the Notifications