ಲೋಕಸಭಾ ಚುನಾವಣೆ : 5 ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟ ಮಹಿಳಾ ಕಾಂಗ್ರೆಸ್‌

ಬೆಂಗಳೂರು, ಜನವರಿ 10 : 2019ರ ಲೋಕಸಭಾ ಚುನಾವಣೆಯಲ್ಲಿ 5 ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಕರ್ನಾಟಕ ಮಹಿಳಾ ಕಾಂಗ್ರೆಸ್ ಬೇಡಿಕ ಇಟ್ಟಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಲು ನಿರ್ಧರಿಸಲಾಗಿದೆ.

ಮೂರು ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಮಹಿಳಾ ಕಾಂಗ್ರೆಸ್ ಹೇಳಿತ್ತು. ಆದರೆ, ಪಕ್ಷದಲ್ಲಿರುವ ಮಹಿಳಾ ನಾಯಕರು ಮತ್ತು ಅವರ ಬೆಂಬಲಿಗರು 28 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

'ಕನಿಷ್ಠ ಮೂರು ಕ್ಷೇತ್ರಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಬಿಟ್ಟು ಕೊಡಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ' ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂಬುದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆಶಯ. 2018ರ ವಿಧಾನಸಭೆ ಚುನಾವಣೆಯಲ್ಲಿ 15 ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಾಗಿತ್ತು.

ಲಕ್ಷ್ಮೀ ಹೆಬ್ಬಾಳ್ಕಾರ್ ಕಣಕ್ಕೆ?

ಲಕ್ಷ್ಮೀ ಹೆಬ್ಬಾಳ್ಕಾರ್ ಕಣಕ್ಕೆ?

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ಕಾರ್ಯಕರ್ತರ ಒತ್ತಡ. 2014ರ ಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದರು. 478557 ಮತಗಳನ್ನು ಪಡೆದು ಬಿಜೆಪಿಯ ಸುರೇಶ್ ಅಂಗಡಿ ಅವರ ವಿರುದ್ಧ ಸೋಲು ಕಂಡಿದ್ದರು.

ಮಾರ್ಗರೇಟ್ ಆಳ್ವಾ

ಮಾರ್ಗರೇಟ್ ಆಳ್ವಾ

ಉತ್ತರ ಕನ್ನಡ ಕ್ಷೇತ್ರದಿಂದ ರಾಜಸ್ಥಾನದ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಮಾರ್ಗರೇಟ್ ಆಳ್ವಾ ಅವರು ಪ್ರಭಾವ ಹೊಂದಿದ್ದಾರೆ.

ವಿಜಯಪುರ, ಬೀದರ್, ಬಾಗಲಕೋಟೆ ಕ್ಷೇತ್ರ

ವಿಜಯಪುರ, ಬೀದರ್, ಬಾಗಲಕೋಟೆ ಕ್ಷೇತ್ರ

ಎಐಸಿಸಿ ಸದಸ್ಯೆ ಕಾಂತಾ ನಾಯ್ಕ್ ಅವರು ವಿಜಯಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಪತ್ನಿ ಗೀತಾ ಅವರನ್ನು ಬೀದರ್‌ನಿಂದ ಕಣಕ್ಕಿಳಿಸುವ ಕುರಿತು ಚರ್ಚೆ ನಡೆಯುತ್ತಿದೆ. ಬಾಗಲಕೋಟೆ ಕ್ಷೇತ್ರದಿಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರ ಅವರು ಅಭ್ಯರ್ಥಿಯಾಗಬೇಕು ಎಂಬ ಒತ್ತಾಯವಿದೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರ

ಬೆಂಗಳೂರು ಸೆಂಟ್ರಲ್ ಕ್ಷೇತ್ರ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ನಿ ತಬು ಅವರನ್ನು ಕಣಕ್ಕಿಳಿಸುವ ಚಿಂತನೆ ಇದೆ. ಆದರೆ, ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್, ಮಾಜಿ ಐಪಿಎಸ್ ಅಧಿಕಾರಿ ಎಚ್.ಟಿ.ಸಾಂಗ್ಲಿಯಾನ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+