ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಗೌರವ

|
Google Oneindia Kannada News

ಬೆಂಗಳೂರು, ಜನವರಿ 25 : ಸಾಲುಮರದ ತಿಮ್ಮಕ್ಕ ಸೇರಿದಂತೆ ಕರ್ನಾಟಕದ 5 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. 70ನೇ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ 2019ನೇ ಸಾಲಿನ ಪದ್ಮ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕೇಂದ್ರ ಗೃಹ ಇಲಾಖೆ ಶುಕ್ರವಾರ ರಾತ್ರಿ 2019ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿವಿಧ ಸಾಧಕರಿಗೆ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.

ಪ್ರಣಬ್ ಮುಖರ್ಜಿ, ನಾನಾಜಿ, ಭೂಪೇನ್ ಹಜಾರಿಕಾಗೆ ಭಾರತರತ್ನಪ್ರಣಬ್ ಮುಖರ್ಜಿ, ನಾನಾಜಿ, ಭೂಪೇನ್ ಹಜಾರಿಕಾಗೆ ಭಾರತರತ್ನ

Padma awards

4 ಸಾಧಕರಿಗೆ ಪದ್ಮವಿಭೂಷಣ, 14 ಸಾಧಕರಿಗೆ ಪದ್ಮಭೂಷಣ, 94 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಕರ್ನಾಟಕ ಮೂಲದ ಐವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿವಕುಮಾರ ಶ್ರೀಗಳಿಗೆ ಭಾರತ ರತ್ನವಿಲ್ಲ, ಕಾಂಗ್ರೆಸ್‌ ಅಸಮಾಧಾನಶಿವಕುಮಾರ ಶ್ರೀಗಳಿಗೆ ಭಾರತ ರತ್ನವಿಲ್ಲ, ಕಾಂಗ್ರೆಸ್‌ ಅಸಮಾಧಾನ

ಕರ್ನಾಟಕದ ಸಾಧಕರು : ಪ್ರಭುದೇವ (ಸಂಗೀತ,ನೃತ್ಯ), ರೋಹಿಣಿ ಗೋಡುಬಳೆ (ವಿಜ್ಞಾನ, ಇಂಜಿನಿಯರಿಂಗ್), ಶಾರದಾ ಶ್ರೀನಿವಾಸನ್ (ಪುರಾತತ್ವ), ರಾಜೀವ್ ತಾರಾನಾಥ್ (ಸಂಗೀತ, ಕಲೆ), ಸಾಲುಮರದ ತಿಮ್ಮಕ್ಕ (ಸಮಾಜ ಸೇವೆ).

ಪದ್ಮವಿಭೂಷಣ ಮತ್ತು ಪದ್ಮಭೂಷಣ ಪ್ರಶಸ್ತಿಗೆ ಕರ್ನಾಟಕದ ಯಾವುದೇ ಸಾಧಕರನ್ನು ಆಯ್ಕೆ ಮಾಡಿಲ್ಲ. ತುಮಕೂರಿನ ಸಿದ್ದಗಂಗಾ ಮಠದ ದಿ.ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗುವ ನಿರೀಕ್ಷೆ ಇತ್ತು. ಆದರೆ, ಅವರಿಗೆ ಪ್ರಶಸ್ತಿ ನೀಡಿಲ್ಲ.

ಮುಖ್ಯಮಂತ್ರಿಗಳ ಅಭಿನಂದನೆ : ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಐವರು ಸಾಧಕರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

English summary
Ministry of home affairs announced the 2019 Padma awards. Here is the list of awardees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X