ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್‌ ತಯಾರಿ- ನ.1 ರಿಂದ ಪಂಚರತ್ನ ಯಾತ್ರೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 26: ಕರ್ನಾಟಕ ರಾಜ್ಯೋತ್ಸವದ ನವೆಂಬರ್ 1 ರಂದು ಜೆಡಿಎಸ್ ಮಹತ್ವಾಕಾಂಕ್ಷಿ ಕಾರ್ಯಕ್ರಮ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. 2023ರ ಚುನಾವಣೆಯಲ್ಲಿ ಮಿಷನ್ 123 ಅಜೆಂಡಾವನ್ನು ಪ್ರಮುಖವಾಗಿಟ್ಟುಕೊಂಡು ಯಾತ್ರೆಯನ್ನು ಕೈಗೊಳ್ಳಲಾಗುತ್ತಿದೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ಪದಾಧಿಕಾರಿಗಳ ಸಭೆಯ ನಂತರ ಈ ವಿಚಾರವ್ನನು ಮಾಜಿ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ತಿಳಿಸಿದರು. "ಪಂಚರತ್ನ ಯಾತ್ರೆ ನವೆಂಬರ್ 1 ರಂದು ನಡೆಯಬಹುದು ಎಂದು ನಿರ್ಧಾರ ಮಾಡಲಾಗಿದೆ. ನಾವು ನಮ್ಮ ಕಾರ್ಯಕ್ರಮ ಜನತೆಗೆ ತಲುಪಬೇಕಾಗಿದೆ. ಇದೇ ವೇಳೆ ರಾಷ್ಟ್ರೀಯ ಪಕ್ಷಗಳು ಅಬ್ಬರ ಮಾಡುತ್ತೇವೆ. ಹೀಗಾಗಿ ನಾವು ಅತುರವಿಲ್ಲದೆ ಯಾತ್ರೆ ಮಾಡುತ್ತೇವೆ. ಆ ಪಕ್ಷಗಳ ಕಾರ್ಯಕ್ರಮ ಮುಗಿಯಲಿ. ಈ ವಿಷಯವನ್ನು ಪದಾಧಿಕಾರಿಗಳಿಗೆ ಕಠಿಣವಾಗಿಯೇ ಹೇಳಿದ್ದೇನೆ" ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.

ಪಂಚರತ್ನ ರಥಯಾತ್ರೆ ಕಳೆದ ತಿಂಗಳು ಪ್ರಾರಂಭ ಆಗಬೇಕಿತ್ತು. ಆದರೆ ಮಳೆಯಿಂದ ಮುಂದೂಡಿಕೆ ಮಾಡಲಾಗಿತ್ತು. ಇನ್ನು ಬಿಜೆಪಿ ನಾಯಕರು ಧಮ್ ತಾಕತ್ ಬಗ್ಗೆ ಮಾಡುತ್ತಿದ್ದಾರೆ. ನಾವು ಪಂಚರತ್ನ ಯಾತ್ರೆ ಮಾಡುತ್ತಿದ್ದೇವೆ. ಸ್ವತಂತ್ರ ಸರ್ಕಾರ ಬಂದರೆ ಏನು ಮಾಡುತ್ತೇವೆ ಎನ್ನುವುದನ್ನು ಜನರಿಗೆ ಹೇಳುತ್ತೇವೆ. ಕೆಲ ತಿಂಗಳ ಹಿಂದೆ ಯಶಸ್ವಿಯಾಗಿ ಜನತಾ ಜಲಧಾರೆ ಸಮಾವೇಶ ಮಾಡಿದ್ದೆವು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸ್ವಾತಂತ್ರ್ಯವಾಗಿ ಅಧಿಕಾರಕ್ಕೆ ಬಂದರೆ ಅನುಷ್ಟಾನ

ಸ್ವಾತಂತ್ರ್ಯವಾಗಿ ಅಧಿಕಾರಕ್ಕೆ ಬಂದರೆ ಅನುಷ್ಟಾನ

ರಾಜ್ಯದಲ್ಲಿ ನೀರಾವರಿ ಯೋಜನೆಗಳ ಜಾರಿಗೆ ತರಬೇಕೆಂದರ ಲಕ್ಷ ಲಕ್ಷ ಕೋಟಿ ಹಣವನ್ನು ಹಾಕಬೇಕು. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆಗಳಿಗೆ ಒತ್ತನ್ನು ನೀಡಲಾಗುತ್ತದೆ. ನೀರಾವರಿ ಯೋಜನೆಗಳಿಗೆ ಕೊನೆ ಪಕ್ಷ ಮೂರರಿಂದ ನಾಲ್ಕು ಲಕ್ಷ ಕೋಟಿ ಬೇಕಾಗಿದೆ. ಅದಕ್ಕೆ ಯಾವ ರೀತಿಯ ದೂರದೃಷ್ಟಿ ಎನ್ನುವುದನ್ನು ಪಂಚರತ್ನ ರಥಯಾತ್ರೆಯಲ್ಲಿ ಜನತೆಗೆ ತಿಳಿಸುತ್ತೇವೆ ಎಂದರು ಮಾಜಿ ಸಿಎಂ ಕುಮಾರ ಸ್ವಾಮಿ ತಿಳಿಸಿದರು.

ಬೆಂಗಳೂರಿನಲ್ಲಿ ಸಮಾರೋಪ

ಬೆಂಗಳೂರಿನಲ್ಲಿ ಸಮಾರೋಪ

ಮುಂದಿನ ತಿಂಗಳು ಅಕ್ಟೋಬರ್ 8ರಂದು ಜನತಾ ಮಿತ್ರ ಸಮಾರೋಪ ಸಮಾರಂಭವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈಗಾಗಲೇ ಬೆಂಗಳೂರಿನ ಉದ್ದಗಲಕ್ಕೂ ಜನತಾ ಮಿತ್ರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈಗ ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಜನತೆಗೆ ನಮ್ಮ ಪಕ್ಷದ ಕಾರ್ಯಕ್ರಮಗಳನ್ನು ತಿಳಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಆರು ತಿಂಗಳ ಕಾರ್ಯವೈಕರಿ ಬಗ್ಗೆ ಚರ್ಚೆ

ಆರು ತಿಂಗಳ ಕಾರ್ಯವೈಕರಿ ಬಗ್ಗೆ ಚರ್ಚೆ

ಸಿಎಂ ಇಬ್ರಾಹಿಂ ರಾಜ್ಯ ಘಟಕದ ಅಧ್ಯಕ್ಷರಾದ ನಂತರ ರಾಜ್ಯ ಕಾರ್ಯಕಾರಣಿಗೆ ಹೊಸ ಸದಸ್ಯರನ್ನು ನೇಮಕ‌ ಮಾಡಲಾಗಿತ್ತು. 27 ಪದಾಧಿಕಾರಿ ಹಾಗೂ 40 ಹೆಚ್ಚುವರಿ ಪದಾಧಿಕಾರಿಗಳ ನೇಮಕ ಆಗಿತ್ತು. ಇಂದು ಅವರೆಲ್ಲರ ಜತೆ ಚರ್ಚೆ ನಡೆಸಲಾಗಿದೆ. ಅವರೆಲ್ಲರಿಗೂ ಮುಂದಿನ ಆರು ತಿಂಗಳ ಕಾಲ ಹೇಗೆ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ರಾಜ್ಯ ಕಾರ್ಯಕಾರಣಿ ಸಮಿತಿಗೆ ಆಯ್ಕೆ ಆದ ಮೇಲೆ ಕೆಲವರಿಗೆ ಜಿಲ್ಲಾ ಉಸ್ತುವಾರಿ ಕೊಡುವ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ನೇಮಕ ಮಾಡುವ ಅಧಿಕಾರವನ್ನು ರಾಜ್ಯ ಅಧ್ಯಕ್ಷರಿಗೆ ನೀಡಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾಹಿತಿ ನೀಡಿದರು.
ಒಳ್ಳೆಯದು ಮಾಡಲೆಂದು ಪ್ರಾರ್ಥನೆ

ಒಳ್ಳೆಯದು ಮಾಡಲೆಂದು ಪ್ರಾರ್ಥನೆ

ಮಾಜಿ ಸಿಎಂ ಕುಮಾರಸ್ವಾಮಿಯವರು ನಾಡಿನ ಎಲ್ಲರಿಗೂ ನಾಡಹಬ್ಬ ದಸರಾ ಮತ್ತು ನವರಾತ್ರಿ ಶುಭಾಶಯ ಕೋರಿದರು. ಮಾಜಿ ಮುಖ್ಯಮಂತ್ರಿಗಳು ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳ್ಳೆಯದು ಮಾಡಲೆಂದು ಪ್ರಾರ್ಥಿಸುವುದಾಗಿ ಎಂದು ಹೇಳಿದರು.

English summary
EX CM HD Kumaraswamy said that JDS ambitious program Pancharatna Yatra will be launched on November 1, the day of Rnataka Rajyotsava,the day of karnataka Rajyotsava, the yatra is being carried out keeping the mission 123 agenda as the main focus of the 2023 elections, Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X